ಜನವರಿ 31 ರಿಂದ ಫೆಬ್ರವರಿ 9 ರವರೆಗೆ ಸಂಸತ್ ಅಧಿವೇಶನ ; ಫೆ.1 ರಂದು ಮಧ್ಯಂತರ ಬಜೆಟ್

New Delhi : 17ನೇ ಲೋಕಸಭೆಯ ಕೊನೆಯ ಅಧಿವೇಶನ (session) ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Union Finance Minister Nirmala Sitharaman) ಅವರು ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ (Budget) ಅನ್ನು ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಸಂಸತ್ತಿನ ಉಭಯ ಸದನಗಳನ್ನು(Both Houses) ಉದ್ದೇಶಿಸಿ ಮಾತನಾಡುವುದರೊಂದಿಗೆ ಮಧ್ಯಂತರ ಬಜೆಟ್ (Interim budget) ಅಧಿವೇಶನ ಪ್ರಾರಂಭವಾಗುತ್ತದೆ. ಪ್ರತಿ ಸಾರ್ವತ್ರಿಕ ಚುನಾವಣೆಯ(every general election) ನಂತರ ಮೊದಲ ಅಧಿವೇಶನದ ಆರಂಭದಲ್ಲಿ ಮತ್ತು ಪ್ರತಿ ವರ್ಷದ ಮೊದಲ ಅಧಿವೇಶನದ ಆರಂಭದಲ್ಲಿ ರಾಷ್ಟ್ರಪತಿಗಳು ರಾಜ್ಯಸಭೆ ಮತ್ತು ಲೋಕಸಭೆ ಎರಡನ್ನೂ ಉದ್ದೇಶಿಸಿ ಮಾತನಾಡುತ್ತಾರೆ. ರಾಷ್ಟ್ರಪತಿಗಳ ಭಾಷಣವು ಸಾಮಾನ್ಯವಾಗಿ ಸರ್ಕಾರದ ಹಿಂದಿನ ಸಾಧನೆಗಳು ಮತ್ತು ಮುಂಬರುವ ವರ್ಷಕ್ಕೆ ನೀತಿ ಆದ್ಯತೆಗಳನ್ನು ಎತ್ತಿ ತೋರಿಸುತ್ತದೆ ಮತ್ತು ಸರ್ಕಾರದ ಕಾರ್ಯಸೂಚಿಯ ವಿಶಾಲ ಚೌಕಟ್ಟನ್ನು ಒದಗಿಸುತ್ತದೆ.

ಮಧ್ಯಂತರ ಬಜೆಟ್ ಅಧಿವೇಶನ 2024, ಹದಿನೇಳನೇ ಲೋಕಸಭೆಯ (Seventeenth Lok Sabha) ಕೊನೆಯ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9 ರವರೆಗೆ ಸಂಸತ್ತಿಗೆ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ನಡೆಯಲಿದೆ. ಫೆಬ್ರವರಿ 1 ರಂದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ, ”ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಇನ್ನು ಈ ಅಧಿವೇಶನವು ನರೇಂದ್ರ ಮೋದಿ (Modi) ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಅಧಿವೇಶನವಾಗಲಿದ್ದು, ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಅಧಿವೇಶನ ವೇಳೆ ಮಂಡನೆಯಾಗುವ ಮೋದಿ ಸರ್ಕಾರದ ಕೊನೆಯ ಬಜೆಟ್ ಮೇಲೆ ಇಡೀ ದೇಶದ ಜನರ ಚಿತ್ತ ನೆಟ್ಟಿದೆ. ಚುನಾವಣೆಯ ಹೊಸ್ತಿಲಲ್ಲಿ ಮೋದಿ ಸರ್ಕಾರ (Modi Government) ಹೊಸ ಯೋಜನೆಯನ್ನು ಘೋಷಿಸುತ್ತಾರಾ, ಮತಗಳಿಕೆ ಮಾಡುವ ನಿಟ್ಟಿನಲ್ಲಿ ಬಜೆಟ್ ಮಂಡನೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Exit mobile version