ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಇಂದು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಗಾದಂತಹ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯಲಿದ್ದೇನೆ. ತನ್ನ ಸಂಪರ್ಕಕ್ಕೆ ಬಂದಂತಹ ಯಾರಿಗಾದರೂ ಕೊರೊನಾ ಲಕ್ಷಣಗಳಿದ್ದರೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.