ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ರದ್ದು

ನವದೆಹಲಿ, ನ. 26: ಕೇಂದ್ರ ವಿಮಾನಯಾನ ನಿರ್ದೇಶನಾಲಯ ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿದೆ.

ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಈ ತುರ್ತು ಆದೇಶವನ್ನು ಹೊರಡಿಸಿದೆ ಎಂದು ತಿಳಿಸಿದೆ.

ಪ್ರಯಾಣಿಕರ ವಿಮಾನ ಸಂಚಾರವನ್ನು ನಿರ್ಬಂಧಿಸಲಾಗಿದ್ದರೂ ಸರಕು ಸಾಗಾಟ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Exit mobile version