ಬೆಂಗಳೂರು, ಅ.13: ಕಾಟನ್ ಪೇಟೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ಭೋಗಿ ಎಂಬಾತನನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿ, ವಿಚಾರಣೆಗೆಂದು ಬೆಂಗಳೂರಿಗೆ ಕರೆ ತಂದಿದ್ದಾರೆ.
ಕಾಟನ್ ಪೇಟೆ ಡ್ರಗ್ಸ್ ಪ್ರಕರಣ ಸಂಬಂಧ ಹಲವರನ್ನು ಈಗಾಗಲೇ ಬಂಧಿಸಿರುವ ಸಿಸಿಬಿ ಪೊಲೀಸರು, ಇದೇ ಕೇಸ್ ಗೆ ಸಂಬಂಧಿಸಿ ಇತ್ತೀಚೆಗೆ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ರವಿಶಂಕರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಅಶ್ವಿನ್ ಎಂಬಾತನನ್ನು ಬಂಧಿಸಿದ್ದಾರೆ.