ಬೆಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.24ಕ್ಕೆ ಮುಂದೂಡಲಾಗಿದೆ.
ಈ ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರಿಂದಾಗಿ ಇನ್ನೂ ಮೂರು ದಿನ ರಾಗಿಣಿ ಮತ್ತು ಸಂಜನಾ ಅವರಿಗೆ ಜೈಲೇ ಗತಿಯಾಗಿದೆ.
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನೂ ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ