ತಲಕಾವೇರಿ ಪವಿತ್ರ ತೀರ್ಥೋದ್ಭವ. ಸಭೆ.

ಅಕ್ಟೋಬರ್ 17: ರ ಕಾವೇರಿ ತುಲಾ ಸಂಕ್ರಮಣ ಸಂಬಂಧ ಶಾಸಕರಾದ ಕೆ.ಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಪೂರ್ವ ಸಿದ್ಧತಾ ಸಭೆ ನಡೆಯಿತು.ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮುಡಿಕಟ್ಟಡದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಶಾಸಕರಾದ ಕೆ.ಜಿ ಬೋಪಯ್ಯ ಅವರು ಮಾತನಾಡಿ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಜಾತ್ರಾ ಮಹೋತ್ಸವ ನಡೆಸಬೇಕಿದೆ. ರಾಜ್ಯದ ಬೇರೆ ಜಿಲ್ಲೆಯಗಳಲ್ಲಿ ಪ್ರಕರಣಗಳು ಕಡಿಮೆಯಾಗುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ ಎಂದರು.

ತೀರ್ಥೋದ್ಭವ ಸಂದರ್ಭ ಅಂತರ ಕಾಯ್ದುಕೊಳ್ಳಬೇಕಿದೆ. ತಲಕಾವೇರಿಯಲ್ಲಿ ವಿಪರೀತ ಚಳಿಯಿದ್ದು, ಈ ಸಂದರ್ಭ ಸೋಂಕು ಹರಡುವ ಸಾದ್ಯತೆ ಹೆಚ್ಚಿದ್ದು, ಎಚ್ಚರ ವಹಿಸಯವುದು ಅಗತ್ಯ ಎಂದು ಶಾಸಕರು ಮನವಿ ಮಾಡಿದರು.ಆರ್.ಸಿ.ಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾತನಾಡಿ ತಲಕಾವೇರಿ ಮತ್ತು ಭಾಗಮಂಡಲದ 2 ಕಡೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ 72 ಗಂಟೆಗಳ ಮುಂಚಿತವಾಗಿ ಆರ್.ಟಿ.ಪಿ.ಸಿ.ಆರ್ ಮುಖೇನ ಕೋವಿಡ್ ಪರೀಕ್ಷೆ ಮಾಡಬೇಕಿದೆ ಎಂದರು.

ಸ್ಥಳೀಯ ನಿವಾಸಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆಗಳ ಮುಂಚಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.ದೇವಾಲಯ ಸಮಿತಿ ಅಧ್ಯಕ್ಷರಾದ ಬಿ.ಎಸ್. ತಮ್ಮಯ್ಯ ಅವರು ಮಾತನಾಡಿ ಆರೋಗ್ಯ ಇಲಾಖೆ ಕಾವೇರಿ ತೀರ್ಥೋದ್ಭವ ಸಂಬಂಧ ಹೆಚ್ಚು ಮುತುವರ್ಜಿಯಿಂದ

ಕಾರ್ಯನಿರ್ವಹಿಸಬೇಕು. ಹೊರಗಿನಿಂದ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್, ಪಲ್ಸ್ ಆಕ್ಸಿಮೀಟರ್ ಪರೀಕ್ಷೆಯನ್ನು ನಡೆಸಬೇಕು. ಜಾತ್ರೆಯ ಸಂದರ್ಭ ಯಾವುದೇ ಒಬ್ಬ ವ್ಯಕ್ತಿಗೆ ಸೋಂಕು ಹರಡದಂತೆ ಅತ್ಯಂತ ಎಚ್ಚರಿಕೆಯಿಂದ ಜಾತ್ರಾ ಮಹೋತ್ಸವವನ್ನು ನಡೆಸಬೇಕಿದೆ ಎಂದು ಅವರು ತಿಳಿಸಿದರು.

Exit mobile version