ದಸರಾ ಉತ್ಸವಕ್ಕೆ: ಸಿಎಂ ಗೆ ಆಹ್ವಾನ

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕೃತ ಆಹ್ವಾನ ನೀಡಲಾಯಿತು.ಸೋಮವಾರ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿಯಾಗಿ ದಸರಾಗೆ ಅಧಿಕೃತ ಆಹ್ವಾನ ನೀಡಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ ಉಪಸ್ಥಿತರಿದ್ದರು.

ಅಂತೆಯೇ, ದಸರಾ ಮಹೋತ್ಸವ-2020 ಉದ್ಘಾಟಕರಾದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರಿಗೆ ದಸರಾ ಮಹೋತ್ಸವಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು. ಸಚಿವ ಎಸ್.ಟಿ.ಸೋಮಶೇಖರ್ ಅವರು ಸೋಮವಾರ ಮಂಜುನಾಥ್ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಆಹ್ವಾನ ಕೋರಿದರು. ಈ ವೇಳೆ ಸಂಸದ ಪ್ರತಾಪಸಿಂಹ, ಮೇಯರ್ ತಸ್ನೀಂ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Exit mobile version