ಮಂಡ್ಯ, ಅ. 28: ಕಳೆದ ರಾತ್ರಿ ಮಾರಮ್ಮನ ದೇವಾಲಯದ ಫುಜೆಯ ಬಳಿಕ ಪುಳಿಯೊಗರೆಯನ್ನು ಪ್ರಸಾದ ರೂಪದಲ್ಲಿ ನೀಡಲಾಗಿತ್ತು. ಇದನ್ನು ಸೇವಿಸಿದಂತಹ 70ಕ್ಕೂ ಅಧಿಕ ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ನಡೆದಿದೆ.
ಪ್ರಸಾದ ಸೇವಿಸಿ ಹೊಟ್ಟೆ ನೋವು, ವಾಂತಿ ಮಾಡಿಕೊಂಡ 70ಕ್ಕೂ ಹೆಚ್ಚು ಅಸ್ವಸ್ಥಗೊಂಡ ಜನರನ್ನು ಕೂಡಲೇ ಮಳವಳ್ಳಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಹಲಗೂರು ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ ಎಂದು ತಿಳಿದು ಬಂದಿದೆ.