ನವದೆಹಲಿ, ನ. 16: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬರುತ್ತಿದ್ದು ಸೋಮವಾರ ಕೂಡ 30,458 ಹೊಸ ಪ್ರಕರಣಗಳು ದೃಢಪಟ್ಟಿದ್ದರೆ, 435 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 88,45,127ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 1,30,070ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,738 ಕಡಿತಗೊಂಡಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ 4,65,478ಕ್ಕೆ ಇಳಿಕೆ ಕಂಡಿದೆ. ಒಂದೇ ದಿನದಲ್ಲಿ 43,851 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಗೊಂಡವರ ಸಂಖ್ಯೆ 82,49,579ಕ್ಕೆ ಆಗಿದೆ.