ದೇಶದ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಸೇವೆಗೆ ಚಾಲನೆ

ಬೆಂಗಳೂರು: ದೇಶದ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.

ಬೆಂಗಳೂರಿನ ಜಕ್ಕೂರು ವಾಯುನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಲಾಯಿತು. ಹಲವು ಅತ್ಯಾಧುನಿಕ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡಿರುವ ಈ ಸೇವೆಯು ಕೋವಿಡ್ ರೋಗಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನೂ ಒಳಗೊಂಡಿದೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ ಸಿಇಒ ಡಾ: ಶಾಲಿನಿ ನಲ್ವಾಡ್ ಇತರರು ಇದ್ದರು

Exit mobile version