ಬೆಂಗಳೂರು, ಅ.15: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ತಿರುವುಗಳನ್ನು ಪಡೆಯುತ್ತಿದ್ದು, ಇಂದು ಇನ್ನೊಂದು ಪ್ರಮುಖ ತಿರುವನ್ನು ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆಯ ಮೇಲೆ ಧಾಳಿ ನಡೆಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಆದಿತ್ಯ ಬಾಲಿವುಟ್ ನಟ ವಿವೇಕ್ ಓಬೇರಾಯ್ ಮನೆಯಲ್ಲಿ ಇರುವ ಶಂಕೆ ವ್ಯಕ್ತಪಡಿಸಿರುವ ಸಿಸಿಬಿ ಮುಂಬೈನ ಜುಹು ಪ್ರದೇಶದಲ್ಲಿ ವಾಸವಾಗಿರುವ ಬಾಲಿವುಡ್ ನಟ ವಿವೇಕ್ ಓಬೆರಾಯ್ ಮನೆಯ ಮೇಲೆ ಸಿಸಿಬಿ ದಾಳಿ ನಡೆಸಿದೆ.