ನೀಟ್‌ ಮರು ಪರೀಕ್ಷೆಗೆ ಸುಪ್ರಿಂ ಕೋರ್ಟ್ ಅನುಮತಿ

ನವದೆಹಲಿ : ಕೊರೋನಾ ಸೋಂಕಿನಿಂದ ಸೆಪ್ಟೆಂಬರ್ ನಲ್ಲಿ NEET ಪರೀಕ್ಷೆಗೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ನೀಡಿದೆ. ಕೊರೋನಾದಿಂದ ಸಿಇಟಿ ಪರೀಕ್ಷೆಗೆ ಹಾಜರಾಗದ ಅಥವಾ ಕಂಟೈನ್ಮೆಂಟ್ ವಲಯದಲ್ಲಿ ವಾಸಮಾಡುತ್ತಿರುವ ಕಾರಣ ಸೆಪ್ಟೆಂಬರ್ ನಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸಲು ಅಕ್ಟೋಬರ್ 14ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಈ ಕುರಿತಂತೆ ವಿದ್ಯಾರ್ಥಿಗಳು ಸಲ್ಲಿಸಲಾಗಿದ್ದಂತಹ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕೊರೋನಾದಿಂದ ಸಿಇಟಿ ಪರೀಕ್ಷೆ ತಪ್ಪಿಸಿಕೊಂಡಿದ್ದಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಿ, ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಸೂಚಿಸಿದೆ.

 ಅಲ್ಲದೇ ಅಕ್ಟೋಬರ್ 14ರಂದು ನೀಟ್ ಪರೀಕ್ಷೆ ನಡೆಸಿ, ಅಕ್ಟೋಬರ್ 16 ರಂದು ಫಲಿತಾಂಶ ಕೂಡ ಪ್ರಕಟಿಸುವಂತೆ ಸೂಚಿಸಿದೆ. ಹೀಗಾಗಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14ರಂದು ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ.

ಈ ಹಿಂದೆ ಸೆಪ್ಟೆಂಬರ್ 13ರಂದು ನೀಟ್ ಪರೀಕ್ಷೆಯು ನಡೆದಿದ್ದು, ದೇಶಾದ್ಯಂತ 3,843 ಕೇಂದ್ರಗಳಲ್ಲಿ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

Exit mobile version