ಪೂಂಚ್, ಅ. 16: ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಮಂಕೋಟೆ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಗಾಯಗೊಂಡಿದ್ದಾರೆ ಎಂದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಪಾಕಿಸ್ತಾನವು ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಶೆಲ್ ದಾಳಿಯನ್ನು ಇಂದು ಮುಂಜಾನೆ 5.15 ರ ಸುಮಾರಿಗೆ ನಡೆಸಿದೆ. ಈ ಧಾಳಿಯ ಮೂಲಕ ಪಾಕ್ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯೂ ದಿಟ್ಟ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದೊಂದು ವರ್ಷದಲ್ಲಿ ಪಾಕ್ 3,190 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, 24 ಜನ ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬುದು ತಿಳಿದು ಬಂದಿದೆ.