‘ಪುನೀತ ನಮನ’ದಲ್ಲಿ ಕಣ್ಣೀರ ಧಾರೆ: ಅಶ್ವಿನಿ (Ashwini )ಹಾಗೂ ಶಿವರಾಜ್‌ಕುಮಾರ್‌ (Shiva Rajkumar) ಕಣ್ಣಲ್ಲಿ ನಿಲ್ಲದ ನೀರು.

ಪುನೀತ್​ ರಾಜ್​ಕುಮಾರ್​ ( Punith Rajkumar) ಅಗಲಿಕೆ ಇಡೀ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಅವರ ಅಪಾರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ಪುನೀತ ನಮನ ಕಾರ್ಯಕ್ರಮ ನಡೆಯುತ್ತಿದೆ. ರಾಜ್‌ ಕುಟುಂಬದ ಸದಸ್ಯರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ಪುನೀತ ನಮನಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕಾರಣಿಗಳು, ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಅರಮನೆ‌ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ‘ಪುನೀತ ನಮನ‌’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್​​ಗೆ ಬ್ರೇಕ್ ಹಾಕಲಾಗಿದೆ. ಚಿತ್ರಪ್ರದರ್ಶನ ಹೊರತುಪಡಿಸಿ ಯಾವ ಸಿನಿಮಾ ಕೆಲಸಗಳು ನಡೆಯುವುದಿಲ್ಲ. ಕಾರ್ಯಕ್ರಮಕ್ಕೆ‌ ಎಲ್ಲರೂ ಬರಲಿ ಅನ್ನೋ ಉದ್ದೇಶದಿಂದ‌ ಈ ನಿರ್ಧಾರ ಮಾಡಲಾಗಿದೆ.  ಪುನೀತ ನಮನದಲ್ಲಿ ಮನರಂಜನೆಗೆ ಯಾವುದೇ ಅವಕಾಶ‌‌ ಇಲ್ಲದೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ ಆರು ಗಂಟೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

Exit mobile version