ಪೊಲೀಸ್ ಇಲಾಖೆಗೆ ಸರ್ಕಾರದ ಸರ್ಜರಿ: ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ನೇಮಕ

ಕೊರೊನಾ ಸಂಕಷ್ಟದ ನಡುವೆ ರಾಜ್ಯದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ, ಬೆಂಗಳೂರು ಪೊಲೀಸ್ ಆಯುಕ್ತರನ್ನ ಬದಲಿಸುವ ಮೂಲಕ ಮತ್ತೊಮ್ಮೆ ಅಚ್ಚರಿ ಮೂಡಿಸಿದೆ.

ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನ ಎತ್ತಂಗಡಿ ಮಾಡಿರುವ ಸರ್ಕಾರ, ಇವರ ಜಾಗಕ್ಕೆ ಕಮಲ್ ಪಂಥ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ 1990ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿ ಆಗಿರುವ ಕಮಲ್ ಪಂಥ್ ಇಂದಿನಿಂದ ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂಥ್ ಜಾಗಕ್ಕೆ 1994ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂಥ್ ಮತ್ತು ಸುನಿಲ್ ಅಗರ್​ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ನೇಮಕಗೊಂಡಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್, ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಭಾಸ್ಕರ್ ರಾವ್ ಅವರನ್ನ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

Exit mobile version