ಬಾಬರಿ ಮಸೀದಿ ತೀರ್ಪು ದುರಾದೃಷ್ಟಕರ: ಸಿದ್ದರಾಮಯ್ಯ

ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪು ದುರಾದೃಷ್ಟಕರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ. ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ.

ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ ಎಂದು 2019 ನವಂಬರ್ 9ರ ಸುಪ್ರೀಮ್ ಕೋರ್ಟ್ ತೀರ್ಪು ಹೇಳಿದೆ. ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ.

ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಬಾಬರಿ ಮಸೀದಿ ಧ್ವಂಸ ಮಾಡಿದ ಅಪರಾಧಿಗಳನ್ನು ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Exit mobile version