ಹೊಸದಿಲ್ಲಿ, ನ. 17: ಲಾಕ್ಡೌನ್ ಸಮಯದಲ್ಲಿ ಹಲವು ಜನರಿಗೆ ಸಹಾಯಹಸ್ತ ಚಾಚುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿರುವ ಬಾಲಿವುಡ್ ನಟ ಸೋನು ಸೂದ್ ಅವರನ್ನು ಪಂಜಾಬ್ ರಾಜ್ಯ ಚುನಾವಣಾ ರಾಯಭಾರಿಯಾಗಿ ನೇಮಕ ಮಾಡಿ ಭಾರತೀಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಅಲ್ಲದೇ, ಪಂಜಾಬ್ ಮುಖ್ಯ ಚುನಾವಣಾ ಅಧಿಕಾರಿ(ಸಿಇಒ) ಎಸ್. ಕರುಣಾ ರಾಜು ಅವರು ಭಾರತೀಯ ಚುನಾವಣಾ ಆಯೋಗದ ಈ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ ಎಂದು ವರದಿಯಾಗಿದೆ.
ಲಾಕ್ಡೌನ್ ಸಂದರ್ಭದಲ್ಲಿ ಸಾವಿರಾರು ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಸಹಾಯ ಮಾಡಿರುವ ಬಾಲಿವುಡ್ ನಟ ಸೋನುಸೂದ್, ಕೊರೊನಾ ಲಾಕ್ಡೌನ್ ಅನುಭವದ ಕುರಿತು “ಐ ಆಮ್ ನಾಟ್ ಎ ಮೈಸೆ” ಎಂಬ ಪುಸ್ತಕ ಬರೆದಿದ್ದು, ಮುಂದಿನ ತಿಂಗಳು ಪ್ರಕಟವಾಗಲಿದೆ.