ಬಿದ್ದು, ಎದ್ದು, ಗೆದ್ದು ಬರುವೆ: ವಿನಯ್ ಕುಲಕರ್ಣಿ

ಧಾರವಾಡ, ನ. 06: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್‍ ಕುಲಕರ್ಣಿ, ಅವರ ಫೇಸ್ ಬುಕ್ ಖಾತೆಯಲ್ಲಿ ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’ ಎಂದು ಭಾವನಾತ್ಮಕವಾಗಿ ಬರೆಯಲಾಗಿದೆ.

ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್‍ವೊಂದನ್ನು ಮಾಡಿರುವ ಅವರು, ‘ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’. ‘ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ’.

ಸತ್ಯಕ್ಕೆ ಸೋಲಿಲ್ಲ, ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದು ಸುಳ್ಳಾಗುವುದಿಲ್ಲ’ ಎಂದು ಬರೆಯಲಾಗಿದೆ.

Exit mobile version