ಬಿಹಾರ, ಅ.22: ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಶೀಲ್ ಮೋದಿ, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸ್ವಲ್ಪ ಜ್ವರ ಬಿಟ್ಟು ಬೇರೆ ಯಾವುದೇ ಸಮಸ್ಯೆ ಇಲ್ಲ. ಚಿಕಿತ್ಸೆಗಾಗಿ ಪಾಟ್ನಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಾಖಲಾಗಿದ್ದೇನೆ. ಶೀಘ್ರದಲ್ಲೇ ಚುನಾವಣಾ ಪ್ರಚಾರಕ್ಕೆ ಮರಳುವುದಾಗಿ ಟ್ವೀಟ್ ಮಾಡಿದ್ದಾರೆ.