ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಮುಂದುವರಿಯುತ್ತಿದ್ದು 24 ಗಂಟೆಗಳಲ್ಲಿ 86,821 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 63 ಲಕ್ಷ ಗಡಿದಾಟಿದೆ. ಒಂದೇ ದಿನ 1,181 ಮಂದಿ ಮಹಾಮಾರಿ ವೈರಸ್ ನಿಂದಾಗಿ ಸಾವನ್ನಪ್ಪಿದ್ದು ಭಾರತದಲ್ಲಿ ಸಾವಿನ ಸಂಖ್ಯೆ 98,678ಕ್ಕೆ ಏರಿದೆ.
ದೇಶದಲ್ಲಿ ಪತ್ತೆಯಾಗಿರುವ ಒಟ್ಟು 63,12,585 ಮಂದಿ ಸೋಂಕಿತರಲ್ಲಿ 52,73,202 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 9,40,705 ಸಕ್ರೀಯ ಪ್ರಕರಣಗಳು ಇದ್ದು, ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಮಾಹಿತಿ ನೀಡಿದೆ.