ಮತ್ತೆ ಬೀದಿಗಿಳಿಯಲಿದ್ದಾರೆ ಆಶಾ ಕಾರ್ಯಕರ್ತೆಯರು

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು  ರಾಜ್ಯದ ಆಶಾ ಕಾರ್ಯಕರ್ತೆಯರು  ನಾಳೆ (23-9-2020) ಬೆಂಗಳೂರಲ್ಲಿ  ಬ್ರಹತ್ ಪ್ರತಿಭಟನೆ ನಡೆಸಲಿದ್ದಾರೆ.  

ಈ ಪ್ರತಿಭಟನೆಯಲ್ಲಿ ವೇತನ ಹೆಚ್ಚಳ, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ  ಆಶಾ ಕಾರ್ಯಕರ್ತೆಯರು  ಬೃಹತ್ ಧರಣಿ ನಡೆಸಲಿದ್ದಾರೆ ಎಂದು ಆಶಾ ಕಾರ್ಯಕರ್ತೆಯರ ಸಂಘದ  ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ  ಮಾಹಿತಿ ನೀಡಿದ್ದಾರೆ.

ಕೊರೋನಾ ಸಂದರ್ಭದಲ್ಲಿ  ಆಶಾ ಕಾರ್ಯಕರ್ತೆಯರು ಪ್ರಾಣದ ಹಂಗು ತೊರೆದು ಮುಂಚೂಣಿಯಲ್ಲಿ ಕೆಲಸ ಮಾಡಿದ್ದಾರೆ. ಆದರೆ ಅಂಥಾ ಆಶಾ ಕಾರ್ಯಕರ್ತೆಯರಿಗೆ ಸರಕಾರ ಸರಿಯಾದ ವೇತನ ನೀಡುತ್ತಿಲ್ಲ. ಈ ಹಿಂದೆ ಹಲವಾರು ಬಾರಿ  ಮುಷ್ಕರ ನಡೆಸಿದ್ದರೂ ಸರ್ಕಾರದಿಂದ  ಭರವಸೆ ಸಿಕ್ತೇ ವಿನ: ಯಾವುದೇ ಪ್ರಯೋಜನ ಆಗಿಲ್ಲ.

ಸರಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ  ಪ್ರತಿಭಟನೆ ಅನಿವಾರ್ಯವಾಗಿದೆ. ಆಶಾ ಕಾರ್ಯಕರ್ತರಿಗೆ ಮಾಸಿಕ ವೇತನ 12 ಸಾವಿರ ನಿಗದಿಗೆ ಆಗ್ರಹ ಮಾಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ. ಕೊರೋನಾ ವಾರಿಯರ್ಸ್‌ ಎಂದೇ ಪ್ರಖ್ಯಾತರಾದ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಕಡಿಮೆ ಪ್ರೋತ್ಸಾಹ ಧನ ಪಡೆದು ಕೆಲಸ ಮಾಡುತ್ತಿದ್ದಾರೆ.

ಇತ್ತೀಚೆಗೆ ಕಲಬುರ್ಗಿಗೆ ಭೇಟಿ ನೀಡಿದ ವೇಳೆ ಅಲ್ಲಿನ ಆಶಾ ಕಾರ್ಯಕರ್ತೆಯರ ಮನವಿ ಸ್ವೀಕರಿಸಿದ್ದರೂ ಯಾವ ನಿರ್ಧಿಷ್ಟ ಭರವಸೆಯನ್ನೂ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಸೆಪ್ಟೆಂಬರ್  23 ರಂದು ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ತಿಳಿಸಿದ್ದಾರೆ.

Exit mobile version