ಲಕ್ನೋ, ಅ.15: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬುದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಅಸ್ವಸ್ಥರಾಗಿ ಚಿಕಿತ್ಸೆ ಪಡೆದಿದ್ದ ಮುಲಾಯಂ ಸಿಂಗ್ ಯಾದವ್ ಲಕ್ನೋದ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದರು. ವಯೋ ಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದಾರೆ. ಸಮಾಜವಾದಿ ಪಕ್ಷದ ನಾಯಕರಿಗೆ ಕೋವಿಡ್ -19 ವೈರಸ್ ಸೋಂಕಿನ ಮುಖ್ಯ ಲಕ್ಷಣಗಳು ಕಂಡು ಬರದಿದ್ದರೂ ಅವರಿಗೆ ಸಾಂಕ್ರಾಮಿಕ ರೋಗ ಇರುವುದು ದೃಢಪಟ್ಟಿದೆ. ಅಗತ್ಯವಾದ ಎಲ್ಲಾ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೆಡಾಂಟ ಆಸ್ಪತ್ರೆಯ ತಜ್ಞ ವೈದ್ಯರೊಬ್ಬರು ತಿಳಿಸಿದ್ದಾರೆ.