ಮೈಸೂರು, ಅ.13: ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಇದೇ 19ರಂದು ನಡೆಯಲಿದೆ. ಈ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆಯ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಕ್ರಾಫರ್ಡ್ ಹಾಲ್ನಲ್ಲಿ 19ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.