ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡಲ್ಲ : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ನೆರೆಯ ರಾಜ್ಯ ಕೇರಳದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಯನ್ನು ಬಂದ್ ಮಾಡಲಾಗಿದೆ. ಗಡಿಯಲ್ಲಿ ವಾಹನ ಪ್ರವೇಶಿಸುವ ಹಿನ್ನೆಲೆಯಲ್ಲಿ ಚರ್ಚೆ ನಡೆಯುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡೋದಿಲ್ಲ. ಜನರಿಗೆ ಆತಂಕ ಬೇಡ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತೆಯ ಸಹಕಾರದಿಂದ ನಾವು ಕೊರೊನಾ ನಿಯಂತ್ರಿಸಲು ಯಶಸ್ವಿಯಾಗಿದ್ದೇವೆ. ಕೇರಳ ರಾಜ್ಯದಲ್ಲಿ ಸೋಂಕಿತರು ಹೆಚ್ಚಾಗಿರುವುದರಿಂದ ನಮ್ಮ ಜಿಲ್ಲೆಯ ಸುರಕ್ಷತೆ ಮುಖ್ಯ. ಆದ್ದರಿಂದ ಹೊರ ರಾಜ್ಯದವರಿಗೆ ಪ್ರವೇಶ ನೀಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಬೆಳಗ್ಗೆ 7 ರಿಂದ ಮಧ್ಯಾಹ್ನ 12ರ ವರೆಗೂ ಮಾರುಕಟ್ಟೆಗಳು ಓಪನ್ ಇರುತ್ತೆ. ಆದರೆ ಈ ಅವಕಾಶವನ್ನು ಜನರು ದುರುಪಯೋಗಪಡಿಸಿಕೊಳ್ಳಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಹಾಗೂ ಸರ್ಕಾರದ ನಿಯಾಮವಳಿಗಳನ್ನ ಕಠಿಣವಾಗಿ ಸ್ವಯಂ ಪಾಲಿಸಿ ಎಂದು ಮನವಿ ಮಾಡಿದ್ದಾರೆ

Exit mobile version