ರಾಜ್ಯದಲ್ಲಿ ನಿಲ್ಲದ ಕೊರೊನಾ ಆರ್ಭಟ: ಹೊಸದಾಗಿ 5072 ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಶನಿವಾರ ಸಹ ರಾಜ್ಯದಲ್ಲಿ ಕೋವಿಡ್‍-19 ಮಹಾಮಾರಿಗೆ ಹೊಸದಾಗಿ 5072 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಮಾರಕ ಕೊರೊನಾಗೆ ರಾಜ್ಯದಲ್ಲಿ 72 ಮಂದಿ ಬಲಿಯಾಗಿದ್ದಾರೆ.

ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿರುವ ಕೊರೊನಾ ಸೋಂಕು ಹರಡುವಿಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಕೊರೊನಾ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಜಿಲ್ಲಾಡಳಿತ ಸತತ ಪ್ರಯತ್ನ ಮಾಡುತ್ತಿದ್ದರೂ, ಸೋಂಕಿತರ ಸಂಖ್ಯೆ ಮಾತ್ರ ದಿನೇ ದಿನೆ ಹೆಚ್ಚುತ್ತಲೇ ಇದೆ.


ಹೀಗಾಗಿ ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 90942ಕ್ಕೆ ಏರಿಕೆಯಾಗಿದ್ದು, 55,388 ಸಕ್ರಿಯ ಪ್ರಕರಣಗಳಾಗಿವೆ. ಉಳಿದಂತೆ ರಾಜ್ಯದಲ್ಲಿ ಶನಿವಾರ 2403 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಗುಣಮುಖರಾದವರ ಸಂಖ್ಯೆ 33,750ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 2036 ಪ್ರಕರಣಗಳು ಪತ್ತೆಯಾಗಿದ್ದರೆ, 30 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 31,881 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 686 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

Exit mobile version