ರಾಜ್ಯೋತ್ಸವಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು,.31: ನವೆಂಬರ್ 1ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆ ಸಮಯದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಕೊರೊನಾ ಮಾರ್ಗ ಸೂಚಿ ಪ್ರಯುಕ್ತ  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಸೋಂಕು  ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ  ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು .ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸ್ಯಾನಿಟೈಸರ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಡೆಸುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗುವುದು.

ರಾಜ್ಯೋತ್ಸವದ ಆಚರಣೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಗೌರವ ಪೂರಕವಾಗಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.

Exit mobile version