ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಬೆಂಗಳೂರು,ಸೆ.12 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ವತಿಯಿಂದ ಆನಂದ ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಕಾರ್ಯದರ್ಶಿ ಕೆ.ವಿ.ಭಟ್ ಮಾತನಾಡಿ, ರಾಜ್ಯದಲ್ಲಿ 10ಸಾವಿರ ಮಂದಿ ಹಾಸ್ಟೆಲ್ ಗಳಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಮೂರು ಸಾವಿರ ನೌಕರರನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ಸುಮಾರು 2,500ಮಂದಿ ನೌಕರಿ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹೊರಗುತ್ತಿಗೆ ನೌಕರರನ್ನು ಸೇವೆಸಲ್ಲಿಸುವ ವಸತಿ ನಿಲಯದಲ್ಲಿ ಮುಂದುವರೆಸಬೇಕೆಂದು ಆಗ್ರಹಿಸಿದರು.

Exit mobile version