ರಾಮ್ ವಿಲಾಸ್ ಪಾಸ್ವಾನ್‌ಗೆ ಮೋದಿ ಅಂತಿಮ ನಮನ

ನವದೆಹಲಿ : ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದ್ರು. ಪಾಸ್ವಾನ್ ಅವರ ಪಾರ್ಥೀವ ಶರೀರವನ್ನು ಅವರ ನವದೆಹಲಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿ ಅನೇಕ ಗಣ್ಯರು ಅಂತಿಮ ದರ್ಶನ ಪಡೆದ್ರು.

ಎಲ್ ಜೆ ಪಿ ನಾಯಕ 74 ವರ್ಷದ  ರಾಮ್ ವಿಲಾಸ್ ಪಾಸ್ವಾನ್ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ  ಪಾಸ್ವಾನ್ ಅವರು ದೆಹಲಿಯ ಎಸ್ಕಾರ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೇರಿದಂತೆ ದೇಶದ ಅನೇಕ ಗಣ್ಯ ವ್ಯಕ್ತಿಗಳು ಪಾಸ್ವಾನ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಇಂದು ಶೋಖಾಚರಣೆಯನ್ನು ಘೋಷಿಸಿದೆ.

Exit mobile version