ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಯುವರತ್ನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿರುವ ಗೊಂಡಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿರುವ ನಿರ್ದೇಶಕ ಸಂತೋಷ್ ಆನಂದ್ ರಾಮ್, ಅಪ್ಪು ಅಭಿಮಾನಿಗಳಿಗೆ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನೇ ಕೊಟ್ಟಿದ್ದಾರೆ.
ಸಿನಿಪ್ರಿಯರಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಯುವರತ್ನ ಸಿನಿಮಾದಲ್ಲಿ ಪುನೀತ್ ಕಾಲೇಜು ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದಾರೆ. ಆಗಾಗ ಚಿತ್ರದ ಹೊಸ ಪೋಸ್ಟರ್ಗಳನ್ನು ರಿಲೀಸ್ ಮಾಡುತ್ತಿರುವ ನಿರ್ದೇಶಕ ಪುನೀತ್ ಅವರ ಪಾತ್ರದ ಪರಿಚಯ ಮಾಡಿಕೊಟ್ಟಿದ್ದು, ಇದೀಗ ಹೊಸ ಪೋಸ್ಟರ್ ಅನ್ನು ಟ್ವಿಟರ್ ನಲ್ಲಿ ರಿಲೀಸ್ ಮಾಡಿದ್ದಾರೆ.
ಹೊಸದಾಗಿ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್ನಲ್ಲಿ ಬರೆದಿರುವ “ನಾವ್ ಯಾವತ್ತು ಬೇರೆಯವರ ROUTE ಅಲ್ಲಿ TRAVEL ಆಗಲ್ಲ! ನಮ್ದೇ ದಾರಿ… ನಮ್ದೇ ಸವಾರಿ… ಪಕ್ಕದಲ್ಲಿ FERRARI ಹೋದ್ರು ತಲೆಕೆಡಿಸಿಕೊಳ್ಳಲ್ಲ” ಎಂಬ ಸಾಲುಗಳು ಪುನೀತ್ ಅಭಿಮಾನಿಗಳನ್ನ ಆಕರ್ಷಿಸಿದೆ.