ವರುಣನ ಆರ್ಭಟಕ್ಕೆ ಕೋಟ್ಯಾಂತರ ರೂಪಾಯಿ ಮೌಲ್ಯದ ತೋಟಗಾರಿಕಾ ಬೆಳೆ ನಾಶ

ಕೊಪ್ಪಳ,. 13: ಕಳೆದ ಎರಡು ದಿನಗಳಿಂದ ಸತತವಾಗಿ ವರುಣನ ಆರ್ಭಟ ಜೋರಾಗುತ್ತಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಕೋಟ್ಯಾಂತರ ರೂಪಾಯಿ ಹಾನಿಯಾಗಿದೆ. ಜಿಲ್ಲಾಡಳಿತ ನೀಡಿರುವ ಮಾಹಿತಿಯ ಪ್ರಕಾರ ಸುಮಾರು 10 ಕೋಟಿ ರೂ. ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ‌.

ಈವರೆಗೆ ಜಿಲ್ಲೆಯಲ್ಲಿ ವಾಡಿಕೆಯಂತೆ 525 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ ವಾಡಿಕೆಗಿಂತ ಶೇ. 40 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಅಂದರೆ ಒಟ್ಟು 736 ಮಿಲಿಮೀಟರ್ ಮಳೆಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ಮಳೆ 60 ಮಿಲಿ ಮೀಟರ್ ಮಳೆಯಾಗಬೇಕಾಗಿತ್ತು. ಆದರೆ 82 ಮಿಲಿ ಮೀಟರ್ ಮಳೆ ಸುರಿದಿದೆ. ಕಳೆದೆರಡು ದಿನಗಳಲ್ಲಿನ ವರುಣನ ಅಬ್ಬರಕ್ಕೆ ಜಿಲ್ಲೆಯಾದ್ಯಂತ 140 ಕಚ್ಚಾ ಮನೆಗಳು ಹಾನಿಗೊಳಗಾಗಿವೆ. ಇನ್ನು 140 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆಗಳು, 830 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕೆ ಬೆಳೆಗಳು ಮಳೆಯಿಂದ ಹಾನಿಯಾಗಿವೆ. ಹಾನಿ ಕುರಿತು ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ ಎಂದು ಒಟ್ಟಾರೆಯಾಗಿ ಅಂದಾಜಿಸಿದ್ದಾರೆ .

Exit mobile version