ಲಂಡನ್, ಅ.09: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೆನ್ನುನೋವಿನಿಂದ ಬಳಲುತ್ತಿದ್ದು, ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅ.4ರಂದು ಹಾರ್ದಿಕ್ ಪಾಂಡ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಆಸ್ಪತ್ರೆಯಲ್ಲೇ ಇರುವ ಪಾಂಡ್ಯ ಮಂಗಳವಾರ ತಮ್ಮ ಚೇತರಿಕೆಯ ಬಗ್ಗೆ ಟ್ವಿಟರ್ನಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳಿಗೆ ಅಪ್ಡೇಟ್ ನೀಡಿದ್ದಾರೆ.
“ಮಗುವಿನಂತೆ ಹೆಜ್ಜೆ ಇಡುತ್ತಿದ್ದೇನೆ. ಆದರೆ ಸಂಪೂರ್ಣವಾದ ಫಿಟ್ನೆಸ್ ದಾರಿ ಇಲ್ಲಿಯೇ ಈಗಲೇ ಆರಂಭವಾಗಿದೆ. ನನಗಾಗಿ ಪ್ರಾರ್ಥಿಸಿದ, ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದಾರೆ.