ಶಸ್ತ್ರಚಿಕಿತ್ಸೆಯ ಬಳಿಕ ಹೆಜ್ಜೆ ಇಡಲು ಸಿದ್ಧರಾದ ಟೀಂ ಇಂಡಿಯಾ ಆಲ್​ರೌಂಡರ್

ಲಂಡನ್, ಅ.09: ಟೀಂ ಇಂಡಿಯಾ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಬೆನ್ನುನೋವಿನಿಂದ ಬಳಲುತ್ತಿದ್ದು, ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅ.4ರಂದು ಹಾರ್ದಿಕ್ ಪಾಂಡ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಆಸ್ಪತ್ರೆಯಲ್ಲೇ ಇರುವ ಪಾಂಡ್ಯ ಮಂಗಳವಾರ ತಮ್ಮ ಚೇತರಿಕೆಯ ಬಗ್ಗೆ ಟ್ವಿಟರ್​​ನಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳಿಗೆ ಅಪ್​ಡೇಟ್ ನೀಡಿದ್ದಾರೆ.

“ಮಗುವಿನಂತೆ ಹೆಜ್ಜೆ ಇಡುತ್ತಿದ್ದೇನೆ. ಆದರೆ ಸಂಪೂರ್ಣವಾದ ಫಿಟ್​ನೆಸ್​​ ದಾರಿ ಇಲ್ಲಿಯೇ ಈಗಲೇ ಆರಂಭವಾಗಿದೆ. ನನಗಾಗಿ ಪ್ರಾರ್ಥಿಸಿದ, ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದಾರೆ.

Exit mobile version