ಶ್ರೀರಾಮುಲು ಖಾತೆ ಡಾ. ಸುಧಾಕರ್‌ ಪಾಲಿಗೆ

ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಇನ್ನು ಮುಂದೆ ಅವಳಿ ಖಾತೆಗಳನ್ನು ವಹಿಸಿಕೊಳ್ಳಲಿದ್ದಾರೆ. ಸಚಿವ ಬಿ. ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆಯನ್ನು ಸುಧಾಕರ್ ಗೆ ನೀಡಲಾಗಿದೆ.

“ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಸಂಜೆ ವೈದ್ಯಕೀಯ ಶಿಕ್ಷಣ ಖಾತೆಯೊಂದಿಗೆ ಆರೋಗ್ಯ ಖಾತೆಯನ್ನೂ ವಹಿಸಿಕೊಂಡು ಸರಿಯಾಗಿ ಕೋವಿಡ್-19 ನಿಯಂತ್ರಿಸಿ ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಭಾಗ್ಯ ಸಿಗುವಂತೆ ಕ್ರಾಂತಿಕಾರಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ” ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮೊದಲಿಗೆ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಜನತೆಗೆ ಉತ್ತಮ ಆರೋಗ್ಯ ಕಲ್ಪಿಸಲು ಶಕ್ತಿಮೀರಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

Exit mobile version