ಸರ್ಕಾರ ಕೈಗೊಂಡ ತೀರ್ಮಾನದಿಂದ ಜನರಿಗೆ ತೊಂದರೆ : ಜನತೆ ಬಳಿ ಕ್ಷಮೆ ಕೇಳಿದ ಮೋದಿ

ಕ್ರೂರ ಕೊರೊನಾ ಸೋಂಕಿನಿOದ ದೇಶ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ತೀರ್ಮಾನದಿಂದ ಜನರಿಗೆ ತೊಂದರೆಯಾಗಿದೆ. ಇದಕ್ಕಾಗಿ ನಾನು ಜನರ ಬಳಿ ಕ್ಷಮೆಯಾಚಿಸುತ್ತೇನೆ. ನನಗೆ ಜನರ ಸಂಕಷ್ಟದ ಅರಿವಿದೆ. ಆದರೆ ಇಂತಹ ಸಂದರ್ಭದಲ್ಲಿ ಈ ನಿರ್ಧಾರ ಅನಿವಾರ್ಯವಾಗಿತ್ತು ಎಂದು ಪ್ರಧಾನಿ ಮೋದಿ ಮನ್ ಕಿ ಮಾತ್ ನಲ್ಲಿ ತಿಳಿಸಿದರು.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಜತೆ ಚರ್ಚೆ ನಡೆಸಿದ ಪ್ರಧಾನಿ. ವೈದ್ಯರ ಕಾರ್ಯವೈಖರಿ ಶ್ಲಾಘಿಸಿದರು. ಕೊರೊನಾ ಚಿಕಿತ್ಸೆಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಸಫಾಯಿ ಕರ್ಮಚಾರಿಗಳಿಗೆ ವಿಮಾ ಯೋಜನೆ ಜಾರಿ ಮಾಡಿದ ಕೇಂದ್ರ ಸರಕಾರ ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲು ಮನವಿ ಮಾಡಿದರು.

ಯಾವುದೇ ಭೀಕರ ಕಾಯಿಲೆ ಗಳನ್ನು ಆರಂಭದಲ್ಲೇ ನಿಗ್ರಹಿಸಬೇಕು. ನಾವು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ. ದೇಶದ ಜನ ಕೊರೊನಾ ವಿರುದ್ದ ಸಂಕಲ್ಪಿತ ಹೋರಾಟ ಮಾಡಬೇಕಿದೆ. ಲಾಕ್ ಢೌನ್ ನಿಮ್ಮನ್ನು ನಿಮ್ಮ ಕುಟುಂಬವನ್ನು ರಕ್ಷಿಸಲು ಲಕ್ಷ್ಮಣ ರೇಖೆ. ಕಾನೂನು ನಿಯಮವನ್ನು ಕೆಲವರು ಉಲ್ಲಂಘಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಕೊರೊನಾ ತಡೆ ಸಾಧ್ಯವಿಲ್ಲ. ವಿಶ್ವದ ಇತರ ದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಭಾರತದಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣ ವಾಗದಂತೆ ಅಗತ್ಯ ಎಚ್ಚರಿಕೆ ವಹಿಸಬೇಕಿದೆ. ಇದಕ್ಕೆ ಜನತೆಯ ಸಹಕಾರ ಅಗತ್ಯ ವಾಗಿದೆ.

ಕೊರೊನಾ ಸೋಂಕಿಗೆ ಆರಂಭದಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗಬಹುದಾಗಿದೆ. ಜನತೆ ಗಾಬರಿಯಾಗುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯ ಹೆಜ್ಜೆಗಳನ್ನಿಡುವ ಅಗತ್ಯವಿದೆ. ಕೊರೊನಾ ಸೋಂಕಿನಿ0ದ ಗುಣಮುಖರಾದ ಹಲವರ ಜತೆ ಸಂವಾದ ನಡೆಸಿದ ಪ್ರಧಾನಿ ಮೋದಿ. ಕೊರೊನಾದಿಂದ ಮುಕ್ತರಾದವರು ತಮ್ಮ ಅನುಭವವನ್ನು ಸಾಮಾಜಿಕ ತಾಣದಲ್ಲಿ ವ್ಯಕ್ತಪಡಿಸಲು ಸಲಹೆ ಮಾಡಿದರು.

Exit mobile version