ಸೆ.28ರಂದು ಕರ್ನಾಟಕ ಬಂದ್ ನಡೆಸಲು ರೈತ ಸಂಘಟನೆಗಳ ನಿರ್ಧಾರ

ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ.28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.

ಅಖಿಲ ಭಾರತ ರೈತ ಸಂಘರ್ಷ ಸಮಿತಿ ಬಂದ್ಗೆ ನಿರ್ಧಾರ ಮಾಡಿದ್ದು, ಸೆ.25ರಂದು ಕರೆ ನೀಡಲಾಗಿರುವ ಭಾರತ್ ಬಂದ್ ಜೊತೆಗೆ ಕರ್ನಾಟದಲ್ಲೂ ಬಂದ್ ಆಚರಿಸಲು ಈ ಮೊದಲು ರೈತ ಸಂಘಟನೆಗಳು ಯೋಜಿಸಿದ್ದವು.

ಆದರೆ 25 ರಂದು ರಾಜ್ಯಾಧ್ಯಂತ ಬೃಹತ್ ಪ್ರತಿಭಟನೆ ಮಾಡಬೇಕೆಂದು ತೀರ್ಮಾನಿಸಲಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದ್ಧಾರೆ. ಆದರೆ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ ಸೇರಿದಂತೆ ಹಲವು ಸಂಘಟನೆಗಳೊಂದಿಗೆ ಈ ವಿಚಾರವಾಗಿ ಸಮಾಲೋಚನೆ ನಡೆಸಿರುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದಂತಾಗಿದೆ.

ಈ ನಡುವೆ ಬಂದ್ ಆಚರಿಸುವ ಕುರಿತು ಮಾತನಾಡಿರುವ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಸೆ.28ರಂದು ಕರ್ನಾಟಕ ಬಂದ್ ಆಚರಿಸುವ ಕುರಿತಂತೆ ತೀರ್ಮಾನವಾಗಿಲ್ಲ.

ಆದರೆ ಸೆ.25ರಂದು ಭಾರತ್ ಬಂದ್ಗೆ ಬೆಂಬಲ ನೀಡಲಿದ್ದು, ಅಂದು ರೈತ ಸಂಘದಿಂದ ರಸ್ತೆ ತಡೆ, ಜೈ ಭರೋ ಕಾರ್ಯ ಮಾಡುತ್ತೇವೆ. ಐಕ್ಯ ಸಮಿತಿ ಹೋರಾಟದ ಕೆಲ ಸದಸ್ಯರು ಸೆ.28ರಂದು ಬಂದ್ ಮಾಡಲು ತೀರ್ಮಾನಿಸಿದ್ದು, ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಕುರುಬೂರು ಶಾಂತಕುಮಾರ್ ಸ್ಪಷ್ಟಪಡಿಸಿದ್ದಾರೆ.

Exit mobile version