ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು ಆ 26 : ಕನ್ನಡದ ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿಏರು ಪೇರು ಉಂಟಾದ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ

ದೊಡ್ಡಣ್ಣ ಅವರ ಹೃದಯ ಬಡಿತ ಏರುಪೇರಾದ ಹಿನ್ನಲೆ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಮೂಲಗಳ ಮಾಹಿತಿ ಪ್ರಕಾರ ದೊಡ್ಡಣ್ಣ ಆರೋಗ್ಯ ಸ್ಥಿರವಾಗಿದ್ದು, ಪೇಸ್ ಮೇಕರ್ ಅಳವಡಿಸಲಾಗಿದೆ ಇನ್ನು 3-4 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿ ತಿಳಿಸಿವೆ. ದೊಡ್ಡಣ್ಣ ಅವರು ಕೊನೆಯದಾಗಿ  ಅವರು ‘ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಬೇರೆ ಯಾವುದೇ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. 2010ರ ಬಳಿಕ ದೊಡ್ಡಣ್ಣ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.

Exit mobile version