ಬೆಂಗಳೂರು, ಜೂ. 14: ಮಹಾಮಾರಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೊನಾ ಸೋಂಕಿನಿಂದ ಮೃತಪಟ್ಟವರ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದರು.
ಕೊರೋನಾದಿಂದಾಗಿ ಹಲವು ಬಡಕುಟುಂಬಗಳು ಬೀದಿಗೆ ಬಂದಿವೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಪ್ರಾಪ್ತರು ಕೊರೊನಾದಿಂದ ಬಲಿಯಾದರೆ ಪರಿಹಾರ ಇಲ್ಲ ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.