Visit Channel

ಮುಂಬೈನ ಮಲಾಡ್ ನಲ್ಲಿ ಕಟ್ಟಡ ಕುಸಿತ: 11 ಮಂದಿ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

WhatsApp Image 2021-06-10 at 8.07.02 AM

ಮುಂಬೈ, ಜೂ. 10: ಮಹಾನಗರಿ ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 11 ಮಂದಿ ಸಾವನ್ನಪ್ಪಿರುವ ಘಟನೆ ಮುಂಬೈನ ಪಶ್ಚಿಮ ಮಲಾಡ್​ನ ಮಲ್ವಾನಿ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ.

ಬುಧವಾರ ರಾತ್ರಿ ಸುಮಾರು 11.10ರಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ 11 ಮಂದಿ ಮೃತಪಟ್ಟರೆ, 8 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಿಡಿಬಿಎ ಮುನ್ಸಿಪಲ್​ ಜನರಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಜನರ ಸಹಾಯದೊಂದಿಗೆ ಅವಶೇಷಗಳಡಿ ಸಿಲುಕಿದ್ದ ಸುಮಾರು 15 ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಘಟನೆ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಚಿವ ಅಸ್ಲಾಂ ಶೇಖ್, ಘಟನೆಗೆ ಅತಿಯಾದ ಮಳೆಯೇ ಕಾರಣವಾಗಿದ್ದು, ಮಳೆಯಿಂದಾಗಿ ಕಟ್ಟಡ ಕುಸಿದಿದೆ ಎಂದು ಹೇಳಿದ್ದಾರೆ.

Latest News

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.