ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank) ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ (Specialist Cadre Officers) ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹಾಗೂ ನೇಮಕಾತಿಗೆ (119 Cadre Officer posts) ಬೇಕಾದ ಅರ್ಹತೆ ಹೊಂದಿರುವ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 119 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು (Eligible candidates) ಏಪ್ರಿಲ್ 7 ರಿಂದ ಏಪ್ರಿಲ್ 20 ರಂದು ಅಥವಾ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ಓದಬೇಕು.
ಈ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳು IDBI ಬ್ಯಾಂಕ್ನ ಅಧಿಕೃತ ವೆಬ್ಸೈಟ್ idbibank.in ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ (Apply online) ಸಲ್ಲಿಸಬಹುದು. ಐಡಿಬಿಐ ಬ್ಯಾಂಕ್ ಏಪ್ರಿಲ್ 7 ರಿಂದ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದೆ.

- ಐಡಿಬಿಐ ಬ್ಯಾಂಕಿನಲ್ಲಿ ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಬಹು ಹಂತದ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಹತೆಯ ಆಧಾರದ ಮೇಲೆ ಆರಂಭಿಕ ಕಿರುಪಟ್ಟಿ ಪರಿಶೀಲನೆ (ವಯಸ್ಸು, ಅರ್ಹತೆ, ಅನುಭವ ಇತ್ಯಾದಿಗಳ ಆಧಾರದ ಮೇಲೆ) ದಾಖಲೆ ಪರಿಶೀಲನೆ
ಆಯ್ಕೆಯಾದ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನಕ್ಕೆ (PI) ಕರೆಯಲಾಗುತ್ತದೆ.
ಆಯ್ಕೆಯು ಸಂಪೂರ್ಣವಾಗಿ ಅರ್ಹತೆ ಮತ್ತು ಅನುಭವವನ್ನು ಆಧರಿಸಿರುತ್ತದೆ.
ಇದನ್ನೂ ಓದಿ: ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 102 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನ
- ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್
- ಒಟ್ಟು ಹುದ್ದೆಗಳು: 119
- ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, BE/ B.Tech, CA/ ICWA, BCA, B.Sc, LLB, MCA, M.Sc, ME/ M.Tech, MBA, ಪೂರ್ಣಗೊಳಿಸಿರಬೇಕು. (119 Cadre Officer posts)
- ವಯೋಮಿತಿ: ಅಭ್ಯರ್ಥಿಯು ಏಪ್ರಿಲ್ 01, 2025 ರಂತೆ ಕನಿಷ್ಠ 25 ವರ್ಷ ಮತ್ತು ಗರಿಷ್ಠ 45 ವರ್ಷ ವಯಸ್ಸಿನವರಾಗಿರಬೇಕು.
- ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್ಸಿ,ಎಸ್ಟಿ, ಮಾಜಿ ಸೇವಾ ಅಭ್ಯರ್ಥಿಗಳಿಗೆ: 5 ವರ್ಷ - ಅರ್ಜಿಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: 1050 ರು.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 250 ರು.
ಪಾವತಿ ವಿಧಾನ: ಆನ್ಲೈನ್ ಮೂಲಕ ಪಾವತಿಸಬಹುದಾಗಿದೆ - ವೇತನ ಶ್ರೇಣಿ:
ಮಾಸಿಕ 1,24,000 ದಿಂದ 1,97,000 ವೇತನವನ್ನು ನಿಗದಿಪಡಿಸಲಾಗಿದೆ. - ಆಯ್ಕೆ ವಿಧಾನ:ಪೂರ್ವಭಾವಿ ಸ್ಕ್ರೀನಿಂಗ್ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IDBI ಬ್ಯಾಂಕ್ ನೇಮಕಾತಿ (Bank Recruitment) ಅಧಿಕೃತ ವೆಬ್ಸೈಟ್ https://www.idbibank.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
- ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಏಪ್ರಿಲ್ 07, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 20, 2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಏಪ್ರಿಲ್ 20, 2025