Visit Channel

ಲಾಕ್‌ಡೌನ್‌ ಸಂಕಟ: 1,250 ಕೋಟಿ ರೂ. ವಿಶೇಷ ಆರ್ಥಿಕ ನೆರವು ಘೋಷಿಸಿದ ರಾಜ್ಯ ಸರ್ಕಾರ

yaddi-620x372

ಬೆಂಗಳೂರು, ಮೇ. 19: ಕೋವಿಡ್ 19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ರಾಜ್ಯಸರ್ಕಾರ 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

ಹಿರಿಯ ಸಚಿವರೊಂದಿಗೆ ಸಭೆ ಮುಗಿಸಿ ಸುದ್ದಿಗೋಷ್ಟಿ ನಡೆಸಿದ ಸಿಎಂ ಯಡಿಯೂರಪ್ಪ. 1,250 ಕೋಟಿ ರೂ. ವಿಶೇಷ ಆರ್ಥಿಕ ನೆರವನ್ನು ಘೋಷಿಸಿದ್ದಾರೆ.

ವಿಶೇಷ ಆರ್ಥಿಕ ನೆರವು:

 • ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂ ಪರಿಹಾರ
 • ಅಟೋ, ಟ್ಯಾಕ್ಸಿ ಚಾಲಕರಿಗೆ 3 ಸಾವಿರ ರೂ ಪರಿಹಾರ
 • ಹಣ್ಣು ತರಕಾರಿ ಬೆಳೆಗಾರರಿಗೆ ಪ್ರತಿ ಹೆಕ್ಟೆರ್‌ಗೆ 10 ಸಾವಿರ ಸಹಾಯಧನ
 • ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ
 • ಆಟೋ, ಟ್ಯಾಕ್ಸಿ ಕ್ಯಾಬ್‌ ಚಾಲಕರಿಗೆ 3000 ರೂ ನೆರವು
 • ಬಿಪಿಎಲ್‌, ಅಂತ್ಯೋದಯ ಹೊಂದಿದವರಿಗೆ ತಿಂಗಳಿಗೆ 5 ಕೆಜಿ ಅಕ್ಕಿ
 • ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ ಸಹಾಯಧನ
 • ಸಂಘ ಸಂಸ್ಥೆಗಳ ಸಾಲ ಮರುಪಾವತಿ ಅವಧಿ ಜುಲೈವರೆಗೆ ವಿಸ್ತರಣೆ
 • ಕಟ್ಟಡ ಕಾರ್ಮಿಕರಿಗೂ ರೂ. 3000 ರೂ ಘೋಷಣೆ
 • ಕಲಾವಿದರು, ಕಲಾತಂಡಗಳಿಗೆ ತಲಾ 3000 ರೂ ಘೋಷಣೆ
 • 3 ದಿನಗಳಲ್ಲಿ 2, 150 ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು
 • ಅಕ್ಕಸಾಲಿಗರು, ನೇಕಾರರಿಗೆ ರೂ. 2000 ನೆರವು

ಅಲ್ಲದೇ ಬ್ಯಾಂಕ್‌ಗಳಲ್ಲಿ ಇಎಂಐ ಆರ್‌ಬಿಐ ನಿರ್ಧರಿಸುತ್ತದೆ. ಹಾಗೂ ಇನ್ನುಳಿದ ಪ್ಯಾಕೇಜ್‌ಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಈ ಪ್ಯಾಕೇಜ್‌ ನೆರವು ಫಲಾನುಭವಿಗಳಿಗೆ ನೇರವಾಗಿ ತಮ್ಮ ಬ್ಯಾಂಕ್‌ ಖಾತೆಗೆ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಮೇ. 24ರವರೆಗೆ ಲಾಕಾಡೌನ್‌ ಮುಂದುವರೆಯಲಿದ್ದು, ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಮೇ. 23ಕ್ಕೆ ತೀರ್ಮಾನವಾಗಲಿದೆ ಎಂದು ಸಿಎಂ ಬಿ. ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.