ಕಳೆದ ೨೪ಗಂಟೆಗಳಲ್ಲಿ 1,31,968 ಕೊರೋನಾ ಪ್ರಕರಣ ದಾಖಲು

ದೆಹಲಿ, ಏ. 09: ದೇಶದಲ್ಲಿ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿನಕ್ಕೂ ಆತಂಕ ಮೂಡಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 1,31,968 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ದೇಶದ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 9,79,608ಕ್ಕೆ ತಲುಪಿದೆ. ಒಂದೇ ದಿನದಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಕೊರೊನಾ ಸೋಂಕಿತರು ನಾಲ್ಕನೇ ಬಾರಿ ಪತ್ತೆಯಾದಂತಾಗಿದೆ. ಈ ಮೂಲಕ ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,060,542ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 780 ಜನರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 1,19,13,292 ಜನರು ಗುಣಮುಖರಾಗಿದ್ದಾರೆ. ಈವರೆಗೆ ದೇಶದ 9,43,34,262 ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ. ಅಲ್ಲದೇ, ಕಳೆದ 24 ಗಂಟೆಗಳಲ್ಲಿ 13,64,205 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ದೇಶದಲ್ಲಿ ಅತಿ ಹೆಚ್ಚು ಕೊರೊನಾ ಪತ್ತೆಯಾಗುತ್ತಿರುವ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಎರಡನೆ ಸ್ಥಾನವನ್ನು ಛತ್ತೀಸ​ಗಡ ಪಡೆದುಕೊಂಡಿದೆ. ಅಲ್ಲದೇ ದೇಶದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿವಿಧ ನಗರಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

Exit mobile version