Visit Channel

ಕೊರೊನಾ ಕಂಟಕ: ರಾಜ್ಯದಲ್ಲಿ ನಾಳೆಯಿಂದ 14 ದಿನಗಳ ಕಾಲ ಲಾಕ್‌ಡೌನ್‌: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

WhatsApp Image 2021-04-12 at 5.44.22 PM

ಬೆಂಗಳೂರು, ಏ. 26: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಮಹಾಮಾರಿ ತಡೆಗಟ್ಟಲು ಸರ್ಕಾರ ಬಿಗಿ ಕ್ರಮಕ್ಕೆ ಮುಂದಾಗಿದ್ದು ಈ ನಡುವೆ ರಾಜ್ಯದಲ್ಲಿ ನಾಳೆ ಸಂಜೆ 9 ರಿಂದ 14 ದಿನಗಳ ಕಾಲ ಲಾಕ್ ಡೌನ್ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕೊರೊನಾ ನಿಯಂತ್ರಣ ಸಂಬಂಧ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ  ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಈ ಕೋವಿಡ್ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಹೀಗಾಗಿ ಸಚಿವ ಸಂಪುಟ ಸದಸ್ಯರು, ತಜ್ಞರ ಜೊತೆಗೆ ಚರ್ಚಿಸಿ, ಕೆಲವು ನಿರ್ಧಾರಕ್ಕೆ ಬಂದಿದ್ದೇವೆ. ಸರ್ಕಾರಿ ಆಸ್ಪತ್ರೆಯಲ್ಲಿ 18 ವರ್ಷದಿಂದ 45ವರ್ಷದವರಿಗೆ  ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ. ಈ ಬಗ್ಗೆ ರೂಪುರೇಷೆಗಳನ್ನು ಆರೋಗ್ಯ ಇಲಾಖೆ ಪ್ರಕಟಿಸಲಿದೆ ಎಂದು ತಿಳಿಸಿದರು.

ಈ ಕೋವಿಡ್ ತಡೆಯೋದಕ್ಕೆ ಬಿಗಿ ಕ್ರಮವಾಗಿ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತದೆ. ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ನಂತರ ಎಲ್ಲವೂ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದೆ. ಯಾವುದೇ ಸಾರಿಗೆ ಸಂಚಾರ ಇರುವುದಿಲ್ಲ. ಮೆಟ್ರೋ, ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿರುತ್ತದೆ. ಅಂತರರಾಜ್ಯ ಬಸ್ ಸಂಚಾರವೂ ಕೂಡ ಬಂದ್ ಆಗಲಿದೆ.   ಗಾರ್ಮೆಂಟ್ಸ್ ನೌಕರರನ್ನು ಬಿಟ್ಟು, ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಿಲ್ಲ. ವೈದ್ಯಕೀಯ, ಅಗತ್ಯ ಸೇವೆ ಎಂದಿನಂತೆ ಇರಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರೆಯುತ್ತದೆ.  ಉತ್ಪಾದನಾ ವಲಯ ಎಂದಿನಂತೆ ಮುಂದುವರೆಯುತ್ತೆ. ಕೃಷಿ ಉತ್ಪಾದನಾ ಚಟುವಟಿಕೆಗೆ ತೊಂದರೆ ಇಲ್ಲ.  ನಾಳೆ ರಾತ್ರಿಯಿಂದ  14 ದಿನ ಕೊರೋನಾ ತಡೆಗೆ ಕರ್ನಾಟಕದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ಬಾರ್ ಗಳಲ್ಲಿ ಪಾರ್ಸೆಲ್ ತೆಗೆದುಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.