ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 15 ಮಂದಿ ಸ್ಥಳದಲ್ಲೇ ಸಾವು!

Madhya Pradesh : ಮಧ್ಯಪ್ರದೇಶದ ರೇವಾದಲ್ಲಿ (15 Died In Rewa) ಟ್ರಾಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 15 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ,

ಮತ್ತು 35 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ರಾತ್ರಿ 11.30ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತ (Accident) ನಡೆದ ಸ್ಥಳದಲ್ಲಿದ್ದ ಪಾದಚಾರಿಗಳು ಈ ಘಟನೆಯನ್ನು ಪ್ರತ್ಯೇಕ್ಷವಾಗಿ ಕಂಡವರು, ತಮಗೆ ತಿಳಿದ ಮಾಹಿತಿ ನೀಡಿದ್ದು, ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರ ತಂಡ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪೊಲೀಸರು ಶೀಘ್ರದಲ್ಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ (15 Died In Rewa) ಮತ್ತು ಜಖಂಗೊಂಡ ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತರುವಲ್ಲಿ ಹರಸಾಹಸ ಪಟ್ಟಿದ್ದಾರೆ.

ಬಸ್ಸಿನ ಕ್ಯಾಬಿನ್‌ನಲ್ಲಿ ಸುಮಾರು ಮೂರರಿಂದ ನಾಲ್ಕು ಮಂದಿ ಸಿಲುಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/patient-died-due-to/

ಆಂಬ್ಯುಲೆನ್ಸ್‌ಗಳ ಸಹಾಯದಿಂದ ಗಾಯಾಳುಗಳನ್ನು ಕೂಡಲೇ ಥಿಯೋಂಥರ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿದೆ. ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ಮನೆಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದು, ಪ್ರಯಾಣಿಕರಿಂದ ತುಂಬಿದ್ದ ಬಸ್ ತಿರುವು ರಸ್ತೆಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಉತ್ತರ ಪ್ರದೇಶದ ಬಸ್ ಜಬಲ್‌ಪುರದಿಂದ ರೇವಾ ಮೂಲಕ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿತ್ತು. ಅಪಘಾತದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಸ್ಪಷ್ಟಪಡಿಸಿದ್ದಾರೆ.

https://twitter.com/ChouhanShivraj/status/1583663858727940096?s=20&t=9Pi6HBrpMWVgCX5oApfDwg

ರೇವಾ ಬಸ್-ಟ್ರಾಲಿ ಟ್ರಕ್ ಡಿಕ್ಕಿಯಾದ ಘಟನೆಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ಇಂದು ಬೆಳಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಘಟನೆಯನ್ನು ವಿವರಿಸಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶ ಸರ್ಕಾರವು ಪ್ರಯಾಣಿಕರ ಪಾರ್ಥಿವ ಶರೀರವನ್ನು ಪ್ರಯಾಗ್‌ರಾಜ್‌ಗೆ ಕೊಂಡೊಯ್ಯಲಿದೆ ಎಂದು ಮಾಹಿತಿ ನೀಡಿದೆ.

Exit mobile version