Bengaluru : ಶಾಲೆಯಲ್ಲಿ ನೀಡಲಾಗಿದ್ದ ಪರೀಕ್ಷೆಯ ವೇಳೆ ಕಾಪಿ ಮಾಡಿದ್ದಕ್ಕಾಗಿ ಶಿಕ್ಷಕಿಯೊಬ್ಬರು ಮಾಡಿದ ಅವಮಾನವನ್ನು ತಾಳಲಾರದೆ,
ಬೆಂಗಳೂರಿನ 15 ವರ್ಷದ ವಿದ್ಯಾರ್ಥಿನಿ(Student) ಭಾನುವಾರ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಈಕೆ ನಗರದ ಬಾಣಸವಾಡಿ ನಗರದ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ವಿದ್ಯಾರ್ಥಿನಿ ಸಾವಿಗೆ ಶಾಲೆಯ ಆಡಳಿತ ಮಂಡಳಿಯೇ ಬಲವಾದ ಕಾರಣ ಎಂದು ಮೃತ ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.
ಸದ್ಯ ಈ ಘಟನೆ ಬಗ್ಗೆ ಪೊಲೀಸರು ಶಾಲಾ ಮಂಡಳಿಯನ್ನು ವಿಚಾರಿಸಿದಾಗ, ಶಾಲೆಯ ಅಧಿಕಾರಿಗಳು ಮತ್ತು ಶಿಕ್ಷಕರ ವರ್ಗವು ಶಿಕ್ಷಕಿಗೆ ಬೆಂಬಲಿಸಿ ಮಾತನಾಡಿದ್ದಾರೆ.
ಪೊಲೀಸರು ವಿದ್ಯಾರ್ಥಿನಿಯ ಕೊಠಡಿಯನ್ನು ಪರಿಶೀಲಿಸಿದಾಗ, ಸಾವಿಗೆ ಶರಣಾಗುವ ಮುನ್ನ ವಿದ್ಯಾರ್ಥಿನಿ ಸಾವಿಗೆ ಕಾರಣವನ್ನು ಬರೆದಿಟ್ಟ ಪತ್ರವನ್ನೂ ವಶಪಡಿಸಿಕೊಂಡಿದ್ದಾರೆ.
https://youtu.be/wGmJe0Cl-KA ಅಕ್ರಮ ಸಕ್ರಮದಲ್ಲೇ ಅಕ್ರಮ!
ಪತ್ರದಲ್ಲಿ ಉಲ್ಲೇಖಗೊಂಡಂತೆ, “ಶಾಲೆಯಲ್ಲಿ ನಡೆದಿದ್ದನ್ನು ನನ್ನಿಂದ ಮರೆಯಲು ಸಾಧ್ಯವಾಗುತ್ತಿಲ್ಲ, ತಪ್ಪಿತಸ್ಥ ಭಾವನೆಯಿಂದ ಬದುಕಲು ನನಗೆ ಸಾಧ್ಯವಿಲ್ಲ” ಎಂದು ವಿದ್ಯಾರ್ಥಿನಿ ಬರೆದಿದ್ದಾಳೆ ಎಂದು ತನಿಖೆಯ ಗೌಪ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ದುಡುಕಿ ತೆಗೆದುಕೊಂಡ ನಿರ್ಧಾರಕ್ಕೆ ಆಕೆಯ ಪೋಷಕರು ಮತ್ತು ಕುಟುಂಬ ಸದಸ್ಯರಲ್ಲಿ ಕ್ಷಮೆಯಾಚಿಸಿ, ಅಧಿಕಾರಿಗಳು ದೈರ್ಯ ತುಂಬಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿನಿಯ ತಂದೆ ಪೊಲೀಸರಿಗೆ ನೀಡಿದ ದೂರಿನ ಅನ್ವಯ, ಪರೀಕ್ಷೆಯ ಸಮಯದಲ್ಲಿ ಅವಳು ಕಾಪಿ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾಳೆ ಮತ್ತು ತರಗತಿಯಲ್ಲಿದ್ದ ಅಷ್ಟು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವಳ ಶಿಕ್ಷಕಿಯೊಬ್ಬರು ಅವಳನ್ನು ಅವಮಾನಿಸಿದ್ದಾರೆ, ಶಿಕ್ಷಕಿ ಮಾಡಿದ ಅವಮಾನ ತಾಳಲಾರದೆ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : https://vijayatimes.com/clarke-allegation-over-adil/
ಸೋಮವಾರ ಮೃತ ಪೋಷಕರು ಮತ್ತು ಸಂಬಂಧಿಕರು ಬಾಲಕಿಯ ಶವದೊಂದಿಗೆ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ ತಂದೆಯ ದೂರಿನ ಆಧಾರದ ಮೇಲೆ ರಾಮಮೂರ್ತಿನಗರ ಪೊಲೀಸರು ಅಸ್ವಾಭಾವಿಕ ಮರಣ ವರದಿಯನ್ನು ದಾಖಲಿಸಿಕೊಂಡಿದ್ದಾರೆ.
“ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಇತರ ಸಿಬ್ಬಂದಿಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಗಳ ಕುರಿತು ತನಿಖೆ ನಡೆಸಿ ಶಿಕ್ಷಕಿ ಮತ್ತು ಶಾಲೆಯ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನ್ಯಾಯವ್ಯಾಪ್ತಿಯ ಬ್ಲಾಕ್ ಶಿಕ್ಷಣಾಧಿಕಾರಿ(ಬಿಇಒ) ಜಯಪ್ರಕಾಶ್ ತಿಳಿಸಿದ್ದಾರೆ.
https://youtu.be/-vaB267p8Tc COVER STORY PROMO | ಪೆಟ್ರೋಲ್ ಕಳ್ಳರು!
ಘಟನೆಯ ಬಗ್ಗೆ ನಮಗೆ ತಿಳಿದಿಲ್ಲ ಎಂದು ಶಾಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯ ಪ್ರಾಂಶುಪಾಲರು ಶಿಕ್ಷಕಿಯನ್ನು ಸಮರ್ಥಿಸಿಕೊಂಡಿದ್ದು, ವಿದ್ಯಾರ್ಥಿಯ ಸಾವಿಗೆ ನಮ್ಮ ಶಿಕ್ಷಕಿ ಹೊಣೆಯಲ್ಲ ಎಂದು ಹೇಳಿದ್ದಾರೆ.
ಮೃತ ವಿದ್ಯಾರ್ಥಿನಿಯ ವಿರುದ್ಧ ವಂಚನೆ ಆರೋಪವನ್ನು ಬೆಂಬಲಿಸಲು ತಮ್ಮ ಬಳಿ ಪುರಾವೆಗಳಿವೆ ಮತ್ತು ಅದನ್ನು ಪುನರಾವರ್ತಿಸದಂತೆ ಶಿಕ್ಷಕರು ಕೇಳಿದ್ದಾರೆ ಎಂದು ಹೇಳಲಾಗಿದೆ.