ಬೆಂಗಳೂರು, ನ. 21 : ಈಗಾಗಲೇ ಕೊರೋನಾ ಸಂಕಷ್ಟದಿಂದ ಸಾಕಷ್ಟು ನಿರುದ್ಯೋಗ ಸಮಸ್ಯೆ ಕಾಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ಹೇಳಿದರು. ಹಲವು ಉದ್ಯೋಗಗಳಿಗೆ ನೇಮಕಾತಿ ನಡೆಯುತ್ತಿದ್ದು, ಮತ್ತೆ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.