ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್: 1674 ಹೊಸ ಪ್ರಕರಣ ಪತ್ತೆ, 38 ಮಂದಿ ಬಲಿ

ಬೆಂಗಳೂರು, ಜು. 04: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಮತ್ತೊಮ್ಮೆ ಕೊರೊನಾ‌ ಆರ್ಭಟ ಶುರುವಾಗಿದ್ದು, ರಾಜ್ಯದಲ್ಲಿ ಮಂಗಳವಾರ 1674 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.‌

ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, 3ನೇ ಅಲೆಯ ಆತಂಕ ಸದ್ದಿಲ್ಲದೆ ಶುರುವಾದಂತಿದೆ. ರಾಜಧಾನಿ ಬೆಂಗಳೂರಿನಲ್ಲಿ 477 ಹೊಸ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ 1376 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಮಹಾಮಾರಿಯ ಹೊಡೆತಕ್ಕೆ ರಾಜ್ಯದಲ್ಲಿ 38 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,21,021 ಪರೀಕ್ಷೆಗಳನ್ನು ಮಾಡಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,280ಕ್ಕೆ ಏರಿದೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸೋಂಕು ಹರಡುವಿಕೆ ತಡೆಯಲು ಸೋಂಕಿತರ ಮನೆಯನ್ನು ಬಿಬಿಎಂಪಿ ಸೀಲ್‌ಡೌನ್ ಮಾಡುತ್ತಿದೆ. ನಗರದ ಶೇ 25ರಷ್ಟು ಕಂಟೈನ್ಮೆಂಟ್ ಝೋನ್ ಅಪಾರ್ಟ್‌ಮೆಂಟ್‌ಗಳಾಗಿವೆ. ಪ್ರಸ್ತುತ ಬೆಂಗಳೂರು ನಗರದಲ್ಲಿ 136 ಕಂಟೈನ್ಮೆಂಟ್ ಝೋನ್‌ಗಳಿವೆ. ಇವುಗಳಲ್ಲಿ ಶೇ.25 ಅಪಾರ್ಟ್‌ಮೆಂಟ್‌ಗಳಾಗಿವೆ. ಅಲ್ಲಿ ಜನಸಂದಣಿ ಹೆಚ್ಚಿದ್ದು, ಕೋವಿಡ್ ಸೋಂಕು ಹರಡುವ ಸಾಧ್ಯತೆ ಸಹ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Exit mobile version