ಸತತವಾಗಿ 19ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.
ಡೀಸೆಲ್ ಬೆಲೆ ಪ್ರತಿ ಲೀಟರ್‍ಗೆ 14 ಪೈಸೆ ಹೆಚ್ಚಾಗಿದೆ. ಪೆಟ್ರೋಲ್ ಬೆಲೆ ಲೀಟರ್‍ಗೆ 16 ಪೈಸೆಯಂತೆ ದರ ಏರಿಕೆ ಕಂಡಿದೆ.
ಇಂದು (ಗುರುವಾರದ ಜೂ.25) ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‍ಗೆ 80.02ರು. ಪೆಟ್ರೋಲ್ ಬೆಲೆ ಲೀಟರ್‍ಗೆ 79.92 ರು. ನಷ್ಟಿದೆ. ನಿನ್ನೆ (ಬುಧವಾರ ಜೂ.24) ಪೆಟ್ರೋಲ್ ಬೆಲೆಗಿಂತ ಡೀಸೆಲ್ ಬೆಲೆ ಹೆಚ್ಚಾಗಿತ್ತು. ಒಟ್ಟಾರೆ 19 ದಿನದಲ್ಲಿ ಪೆಟ್ರೋಲ್ ದರದಲ್ಲಿ 10.64 ರು. ಮತ್ತು ಡೀಸೆಲ್ ಬೆಲೆ 9.14 ರು. ಏರಿಕೆಯಾಗಿದೆ. ಸತತವಾಗಿ 83 ದಿನಗಳ ವಿರಾಮದ ಬಳಿಕ ದೇಶಾದ್ಯಂತ ಜೂನ್.7 ರಂದು ಇಂಧನ ದರ ಪರಿಷ್ಕರಣೆ ಪುನರ್ ಆರಂಭವಾಗಿದೆ. ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ಬೆಲೆ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತಾ ಬಂದಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ಬೆಲೆಯ ಆಧಾರದ ಮೇಲೆ ಅಮೆರಿಕ-ಚೀನಾ ನಡುವಿನ ವಹಿವಾಟು, ಕೋವಿಡ್-19 ಸಾಂಕ್ರಾಮಿಕ ರೋಗದ ಆರ್ಥಿಕ ಹೊಡೆತ, ಭಾರತದಲ್ಲಿ ತೈಲದ ಮೇಲೆ ಹೆಚ್ಚಿದ ಅಬಕಾರಿ ಸುಂಕದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದೆ. ಜತೆಗೆ ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿಗದಿ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 82.35 ರು. ಡೀಸೆಲ್ ಬೆಲೆ 75.96 ರು. ಮುಂಬೈನಲ್ಲಿ ಪೆಟ್ರೋಲ್ ಬೆಲೆ 86.54 ರು. ಡೀಸೆಲ್ ಬೆಲೆ 77.76 ರು.ಗೆ ಮಾರಾಟವಾಗುತ್ತಿದೆ.