2020ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ: ಚಾ.ನಗರದಲ್ಲಿ ನಡೆಯಲಿದೆ ಸಮಾರಂಭ

ಚಾಮರಾಜನಗರ, ಜ. 04: 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ಪ್ರಕಟಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಜಮ್ಮ ಜೋಗತಿ ಅವರು, 2020 ನೇ ಸಾಲಿನಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವ 30 ಜಿಲ್ಲೆಗಳ ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದತಜ್ಞರ ಪಟ್ಟಿಯನ್ನು ಪ್ರಕಟಿಸಿದರು.

30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಮತ್ತು ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ಫೆಬ್ರವರಿ ಮೊದಲ ವಾರದಲ್ಲಿ ಚಾಮರಾಜನಗರದಲ್ಲೇ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಅಕಾಡೆಮಿ ಸದಸ್ಯರಾದ ಸಿ.ಎಂ.ನರಸಿಂಹ ಮೂರ್ತಿ ಇತರರು ಹಾಜರಿದ್ದರು.

Exit mobile version