vijaya times advertisements
Visit Channel

March 11, 2021

ಮಹಾರಾಷ್ಟ್ರದಲ್ಲಿ ಏರುತ್ತಿರುವ ಕೊರೋನಾ ಪ್ರಕರಣ; ನಾಗ್ಪುರದಲ್ಲಿ ಒಂದು ವಾರ ಲಾಕ್​ಡೌನ್ ಘೋಷಣೆ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು ಶೇ.85.91 ರಷ್ಟು ಹೊಸ ಕೊರೋನಾ ಪ್ರಕರಣಗಳು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಂತೆ ದೇಶದಲ್ಲಿ ಒಂದೇ ದಿನದಲ್ಲಿ 22,854 ಹೊಸ ಪ್ರಕರಣಗಳು ಕಂಡುಬಂದಿದೆ.

ಮಹಿಳೆ ಮೂಗಿಗೆ ಗುದ್ದಿ ಎಸ್ಕೇಪ್ ಆಗಿದ್ದ ಫುಡ್ ಡೆಲಿವರಿ ಬಾಯ್ ಅರೆಸ್ಟ್

ಜೊಮ್ಯಾಟೋದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾಮರಾಜ ಬಂಧಿತ ಆರೋಪಿ. ಮಾ.10ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಫುಡ್ ಡೆಲಿವರಿ ಮಾಡಲು ಕಾಮರಾಜ್ ತೆರಳಿದ್ದ.

ಎರಡನೇ ಮದುವೆಗೆ ಮನೆಯವರ ನಿರಾಕರಣೆ: ವಿದ್ಯುತ್‌ ಕಂಬ ಏರಿದ 60ರ ವೃದ್ಧ

ಸೊಬ್ರಾನ್‌ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ವೃದ್ಧನ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ವಿದ್ಯುತ್ ಇಲಾಖೆಯವರು ಎಚ್ಚೆತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ರಾತ್ರಿ ಪಾರ್ಟಿಗಳಿಗೆ ನಿಷೇಧ ಹೇರಿದ ರಾಜ್ಯ ಸರ್ಕಾರ

ಈ ಪಾರ್ಟಿಗಳು ಕೊರೊನಾ ಸೋಂಕಿನ ಸೂಪರ್ ಸ್ಪ್ರೆಡರ್‍ಗಳಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಆದೇಶದವರೆಗೂ ಈ ನಿಷೇಧ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಿಪ್ಪೇ ಸಾರಿಸಲು ಎಸ್ಐಟಿಗೆ ವಹಿಸಲಾಗಿದೆ: ಎಚ್‌ಡಿಕೆ ಟೀಕೆ

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣದ ಕುರಿತು ಎಸ್ಐಟಿ ತನಿಖೆ ಮಾಡುತ್ತೇವೆ ಅಂತಾರೆ. ಆದರೆ ಯಾರ ವಿರುದ್ಧ ತನಿಖೆ ಮಾಡ್ತಾರೆ? ಏನಂತ ತನಿಖೆ ಮಾಡ್ತಾರೆ? ಯಾವ ವಿಚಾರಗಳ ಆಧಾರದ ಮೇಲೆ ತನಿಖೆಗೆ ಆದೇಶ ಮಾಡ್ತಾರೆ? ಎಫ್ಎಸ್ಎಲ್ ರಿಪೋರ್ಟ್ನಲ್ಲಿ ನಕಲಿ ಅಂತ ಬರಬಹುದು. ಈ ಹಿಂದೆಯೂ ಇಂತಹ ಅದೆಷ್ಟೋ ತನಿಖಾ ವರದಿಗಳು ಮೂಲೆಗುಂಪಾಗಿವೆ. ಈ ಹಿಂದೆ ಮೇಟಿ ಪ್ರಕರಣದಲ್ಲೂ ಕ್ಲೀನ್ ಚಿಟ್ ಆಯ್ತು

125ನೇ ಸಿನಿಮಾ ಅನೌನ್ಸ್ ಮಾಡಿದ ಹ್ಯಾಟ್ರಿಕ್‌ ಹೀರೋ

ಚಂದನವನದಲ್ಲಿ ನೂರು ಸಿನಿಮಾಗಳನ್ನು ಪೂರೈಸಿ 125 ನೇ ಚಿತ್ರಕ್ಕೆ ಶಿವಣ್ಣ ಭರ್ಜರಿ ತಯಾರಿ ನಡೆಸಿದ್ದಾರೆ. ತಮ್ಮ ಹೊಸ ಸಿನಿಮಾ ಬಗ್ಗೆ ಕೌತುಕದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇಂದು ಸಿಹಿ ಸುದ್ದಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ: ಕರ್ನಾಟಕಕ್ಕೆ ಎಚ್ಚರಿಕೆ ಗಂಟೆ: ಸಚಿವ ಸುಧಾಕರ್

ಅಲ್ಲದೇ, ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ನನ್ನ ಮನವಿ.

ಅಧಿಕೃತವಾಗಿ ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ; ಮಧು ಬಂಗಾರಪ್ಪ

ಸಿದ್ದರಾಮಯ್ಯ ಭೇಟಿ ಮಾಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿರಿಯರು, ಅವರು ಸಿಎಂ ಆಗಿದ್ದವರು, ನಮ್ಮ ತಂದೆನೋ ಸಿಎಂ ಆಗಿದ್ದವರು. ಹೀಗಾಗಿ ಅವರನ್ನ ಭೇಟಿಯಾಗಿದ್ದೇನೆ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ ಮಾಡ್ತೀನಿ ಎಂದರು.

ಶಿವರಾತ್ರಿ ವಿಶೇಷ; ಶಿವ ದೇವಾಲಯಗಳಲ್ಲಿ ರಂಗೇರಿದ ಸಡಗರ ಸಂಭ್ರಮ

ಬೆಂಗಳೂರಿನ ಗವಿ ಗಂಗಾಧರ ದೇವಸ್ಥಾನದಲ್ಲಿ ಮುಂಜಾನೆಯೇ ಶಿವನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಗಳ ವೈಭವ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಇಂದು ಬೆಳಗ್ಗೆಯಿಂದಲೇ ಯಿಂದಲೇ ರುದ್ರಾಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯುತ್ತಿವೆ. ವಿಶೇಷ ಪೂಜೆ, ಪುನಸ್ಕಾರ ಮತ್ತು ಬಿಲ್ವ ಪತ್ರೆ ಅರ್ಪಣೆ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಿಗೆ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರಿಗೆ ವಿಶೇಷ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಅತಿಶೀಘ್ರದಲ್ಲಿ ಭಾರತದಲ್ಲಿ ಆರಂಭವಾಗಲಿದೆ ಐಫೋನ್ ಉತ್ಪಾದನಾ ಸಂಸ್ಥೆ

ಭಾರತದಲ್ಲಿ ಐಫೋನ್ 12 ಸ್ಮಾರ್ಟ್‌ಫೋನ್‌ಗೆ ಹೆಚ್ಚಿನ ಬೇಡಿಕೆಯಿದೆ. ಹಿಂದಿನ ವರ್ಷ ಅಕ್ಟೋಬರ್ ನಲ್ಲಿ ಆಪಲ್ ಸ್ಮಾರ್ಟ್ಫೋನ್ ಗಳ ಮಾರಾಟ ಹೆಚ್ಚಾಗಿತ್ತು. 2020ರಲ್ಲಿ ಈ ಕಂಪನಿ ವ್ಯವಹಾರ ವಾರ್ಷಿಕವಾಗಿ ಶೇಕಡಾ 60ರಷ್ಟು ಬೆಳವಣಿಗೆ ಕಂಡಿತ್ತು. ಹಬ್ಬದ ಋತುವಿನಲ್ಲಿ ಇದರ ಪ್ರಮಾಣ ಶೇಕಡಾ 100ರಷ್ಟಿತ್ತು.