vijaya times advertisements
Visit Channel

March 26, 2021

ರಮೇಶ್ ಜಾರಕಿಹೊಳಿ ಪ್ರಕರಣ: ಸಿಡಿ ವಿಚಾರ ನಮಗೆ ಮುಖ್ಯ ಅಲ್ಲ: ನಿಖಿಲ್ ಕುಮಾರಸ್ವಾಮಿ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಡಿ ವಿಚಾರ ನಮಗೆ ಮುಖ್ಯ ಅಲ್ಲ. ರಾಜ್ಯದಲ್ಲಿ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸುವುದು ಅವಶ್ಯಕವಾಗಿದೆ.

ಚುನಾವಣೆ ಬಾಂಡ್ ವಿತರಣೆಗೆ ತಡೆ ಸಾಧ್ಯವಿಲ್ಲ ಎಂದ ಸುಪ್ರೀಂಅಕೋರ್ಟ್

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಹಾಕಿದ್ದ ಅರ್ಜಿಯ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯಮ್ ಅವರನ್ನು ಒಳಗೊಂಡ ಪೀಠವು ವಿಚಾರಣೆ ನಡೆಸಿತ್ತು. 2018 ಮತ್ತು 2019ರಲ್ಲಿ ಯಾವುದೇ ಅಡೆತಡೆ ಇಲ್ಲದೆ ಬಾಂಡ್​ಗಳನ್ನು ಬಿಡುಗಡೆ ಮಾಡಿದಾಗ ಅಗತ್ಯ ಪ್ರಮಾಣದ ಸುರಕ್ಷತಾ ಕ್ರಮಗಳು ಇದ್ದವು.

ಪ್ರಧಾನಿ ಬಾಂಗ್ಲಾದೇಶ ಪ್ರವಾಸ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರಿಂದ ಸ್ವಾಗತ

ಢಾಕಾ, ಮಾ. 26: ಕೋವಿಡ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದು, ಇಂದು ಬೆಳಗ್ಗೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಬಂದಿಳಿದ ಅವರನ್ನು ಬಾಂಗ್ಲಾ

ಕಣ್ಣುಗಳ ಪಫಿನೆಸ್ ನ್ನು ಕಡಿಮೆ ಮಾಡುವ ನೈಸರ್ಗಿಕ ವಿಧಾನಗಳು ಇಲ್ಲಿವೆ

ಉಪ್ಪು ಅಧಿಕ ರಕ್ತದೊತ್ತಡಕ್ಕೆ ಸಂಬಂಧಿಸಿದೆ, ಆದರೆ ಅದರಲ್ಲಿರುವ ಸೋಡಿಯಂ ಕಣ್ಣುಗಳ ಕೆಳಗೆ ಪಫಿನೆಸ್‌ಗೆ ಕಾರಣವಾಗುತ್ತದೆ. ಉಪ್ಪು ಸೇವನೆಯನ್ನು ಕಡಿಮೆ ಮಾಡುವುದು ಅಥವಾ ಆರೋಗ್ಯಕರ ಆಯ್ಕೆಗೆ ಬದಲಾಯಿಸುವುದು ಉತ್ತಮ ಪರಿಹಾರವಾಗಿದೆ. ಹೆಚ್ಚಿನ ಸೋಡಿಯಂ ಆಹಾರಗಳಾದ ಪಿಜ್ಜಾಗಳು, ಬರ್ಗರ್ ಗಳು ಮತ್ತು ಪೂರ್ವಸಿದ್ಧ ವಸ್ತುಗಳನ್ನು ಸೇವಿಸಬೇಡಿ. ಮನೆಯಲ್ಲಿ ಬೇಯಿಸಿದ ತರಕಾರಿಗಳು, ವಿಶೇಷವಾಗಿ ಹಣ್ಣಿನ್ನು ಹೆಚ್ಚು ಅವಲಂಬಿಸಿ.

ಜೀವ ಭಯದಲ್ಲಿ ಬದುಕುತ್ತಿರುವೆ; ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುವೆ: ಸಿಡಿ ಲೇಡಿ ಘರ್ಜನೆ

ತಮ್ಮ ತಂದೆ-ತಾಯಿ ರಕ್ಷಣೆ ಬಗ್ಗೆ ಹಾಗೂ ಎಸ್ಐಟಿ ಅಧಿಕಾರಿಗಳ ಬಗ್ಗೆ ಭಾರೀ ಆರೋಪ ಮಾಡಿದ್ದರು. ಸಿಡಿ ಲೇಡಿಯ ಈ ವಿಡಿಯೋ ಹೊಸ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಮೂರನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿ, ಎಲ್ಲಾ ಕರ್ನಾಟಕದ ಜನತೆಯ ತಂದೆ-ತಾಯಿ ಆಶೀರ್ವಾದದಿಂದ, ಎಲ್ಲಾ ಪಕ್ಷದ ನಾಯಕರು ಹಾಗೂ ಸಂಘಟನೆಯವರು ನನ್ನ ಬೆಂಬಲಿಸುತ್ತಿದ್ದೀರಾ. ನಾನು 24 ದಿನ ಜೀವ ಭಯದಲ್ಲಿ ಬದುಕುತ್ತಿದ್ದೇನೆ.

ತಮಿಳುನಾಡು ವಿಧಾನಸಭೆ ಚುನಾವಣೆ: ಪ್ರಚಾರಕ್ಕೆ ಸಿದ್ದರಾಮಯ್ಯ ಎಂಟ್ರಿ

ನಾಳೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಡಿಎಂಕೆ, ಕಾಂಗ್ರೆಸ್ ಮೈತ್ರಿ ಪಕ್ಷಗಳ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ತಳಿ, ಡೆಂಕಣಿಕೋಟ, ಹೊಸೂರು, ಬಾಗಲೂರು, ಬೇರಿಗೆ, ಸೂಲಗಿರಿ ಹಾಗೂ ವೇಪನಪಲ್ಲಿಯಲ್ಲಿ ಸಿದ್ದರಾಮಯ್ಯರವರು ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಬ್ಬರು ಸಾವು

ಮುಂಬೈನ ಭಾಂಡುಪ್​ನಲ್ಲಿರುವ ಡ್ರೀಮ್ಸ್ ಮಾಲ್​ನಲ್ಲಿ ಸ್ಥಾಪಿಸಲಾಗಿದ್ದ ಸನ್​ರೈಸ್ ಕೋವಿಡ್ ಹಾಸ್ಪಿಟಲ್​​ನಲ್ಲಿ ರಾತ್ರಿ 12:30ರ ವೇಳೆಯಲ್ಲಿ ಈ ಅವಘಡ ನಡೆದಿದೆ. ಈ ವೇಳೆ ಆಸ್ಪತ್ರೆಯಲ್ಲಿ 70ಕ್ಕೂ ಹೆಚ್ಚು ರೋಗಿಗಳು ಇದ್ದರೆನ್ನಲಾಗಿದೆ. ಬೆಂಕಿ ದುರಂತವಾದ ಬಳಿಕ ಬಹುತೇಕ ರೋಗಿಗಳನ್ನ ಕೂಡಲೇ ಸ್ಥಳಾಂತರ ಮಾಡಲಾಗಿದೆ. ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್

ಆಂಧ್ರ ಪ್ರದೇಶದಲ್ಲಿ ಭಾರತ್ ಬಂದ್‌ಗೆ ವ್ಯಾಪಕ‌ ಬೆಂಬಲ ಸಿಕ್ಕಿದೆ. ಆಂಧ್ರ ಪ್ರದೇಶದ ಗುಂಟೂರು, ವಿಜಯನಗರಂ, ಕರ್ನೂಲು, ಶ್ರೀಕಾಕುಳಂ, ವಿಶಾಖಪಟ್ಟಣಂ ಸೇರಿ ಅನೇಕ‌ ಜಿಲ್ಲೆಗಳಲ್ಲಿ‌ ಬೆಂಬಲ ವ್ಯಕ್ತವಾಗಿದೆ. ಬಸ್ ನಿಲ್ದಾಣಗಳಿಗೆ ಬಸ್​ಗಳು ಸೀಮಿತವಾಗಿದ್ದು ರಸ್ತೆಗಳು ಬಿಕೋ ಎನ್ನುತ್ತಿವೆ. ಕೆಲ ಸಂಘಟನೆಗಳು ಪ್ರತಿಭಟನೆ ಸಹ ನಡೆಸುತ್ತಿವೆ.

ಸಂತ್ರಸ್ತ ಯುವತಿ ರಕ್ಷಣೆಗೆ ಮೊರೆಯಿಡುತ್ತಿರುವುದು ಪೊಲೀಸರ ವೈಫಲ್ಯ ಮತ್ತು ಪೂರ್ವಗ್ರಹಕ್ಕೆ ಹಿಡಿದ ಕನ್ನಡಿ: ಸಿದ್ದರಾಮಯ್ಯ

ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಬಿಡುಗಡೆ ಮಾಡಿರುವ ಎರಡನೇ ವಿಡಿಯೋದಲ್ಲಿ ತನ್ನ ಪೋಷಕರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು. ಹೀಗಾಗಿ ಸರಣಿ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಹೆಣ್ಣುಮಗಳು ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ಕೋರಿ ಮೊರೆಯಿಡುತ್ತಿರುವುದು ರಾಜ್ಯ ಪೊಲೀಸರ ವೈಫಲ್ಯ ಮತ್ತು ಪೂರ್ವಗ್ರಹಕ್ಕೆ ಹಿಡಿದ ಕನ್ನಡಿ

ರಕ್ಷಣೆ ನೀಡುವುದು ಸರ್ಕಾರದ ಮೂಲಭೂತ ಕರ್ತವ್ಯ: ಡಿಕೆಶಿ

ಸದಾಶಿವನಗರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂತ್ರಸ್ತ ಯುವತಿಯ ವಿಡಿಯೋ ನಾನು ನೋಡಿಲ್ಲ. ಈಗಷ್ಟೇ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಎಕನಾಮಿಕ್ ಅಫೆನ್ಸ್ ಪ್ರಕರಣದ ವಿಚಾರಣೆ ಇತ್ತು. ಅದಕ್ಕೆ ಹಾಜರಾಗಿ ಈಗಷ್ಟೇ ಬಂದಿದ್ದೇನೆ. ಕಳೆದ ಬಾರಿ ಹೋಗಲು ಆಗಿರಲಿಲ್ಲ. ಹೀಗಾಗಿ ಇವತ್ತು ಹೋಗಿ ಬಂದಿದ್ದೇನೆ. ಈ ವಿಡಿಯೋ ಏನು ಎಂಬುದನ್ನು ನೋಡುತ್ತೇನೆ’ ಎಂದು ತಿಳಿಸಿದರು.